ಸವಣೂರು ಗ್ರಾ.ಪಂ.ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿ ಪ್ರದಾನ

0

ಸವಣೂರು: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್‌, ಕಾರಂತ ಟ್ರಸ್ಟ್‌, ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಕಾರಂತೋತ್ಸವ, ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಡಬ ತಾಲೂಕಿನ ಸವಣೂರು ಗ್ರಾ.ಪಂ.ಗೆ ಡಾ.ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ನಡೆಯಿತು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೋಟತಟ್ಟುವಿನ ಡಾ. ಶಿವರಾಮ ಕಾರಂತ ಥೀಂ ಪಾರ್ಕಿನಲ್ಲಿ ನಡೆದ ಕಾರಂತೋತ್ಸವ ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗಾಂಧಿ ಗ್ರಾಮ ಪ್ರಶಸ್ತಿ ಸ್ವೀಕರಿಸಿದ 9 ಗ್ರಾಮ ಪಂಚಾಯತುಗಳಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್., ಉಪಾಧ್ಯಕ್ಷೆ ಜಯಶ್ರೀ ವಿಜಯ, ನಿಕಟ ಪೂರ್ವ ಅಧ್ಯಕ್ಷೆ ರಾಜೀವಿ ಶೆಟ್ಟಿ, ಉಪಾಧ್ಯಕ್ಷ ಶೀನಪ್ಪ ಶೆಟ್ಟಿ ನೆಕ್ರಾಜೆ, ಪಿಡಿಓ ಸಂದೇಶ್ ಕೆ.ಎನ್. ಹಾಗೂ ಸದಸ್ಯರು, ಸಿಬಂದಿಗಳು ಹಾಜರಿದ್ದರು.

ಈ ಸಂದರ್ಭದಲ್ಲಿ ಡಾ.ವಿದ್ಯಾಭೂಷಣ ,ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಗುರುರಾಜ್ ಗಂಟಿಹೊಳೆ, ಯಶಪಾಲ್ ಎ.ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ಕೋಟತಟ್ಟು ಗ್ರಾ.ಪಂ.ಅಧ್ಯಕ್ಷ ಸತೀಶ್ ಕುಂದರ್, ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯ ಯು.ಎಸ್.ಶೆಣೈ, ಕೋಟ ಡಾ.ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ.ಕುಂದರ್ ಉಪಸ್ಥಿತರಿದ್ದರು.

ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸ್ವಾಗತಿಸಿದರು. ನರೇಂದ್ರ ಕೋಟ ನಿರೂಪಿಸಿದರು.

LEAVE A REPLY

Please enter your comment!
Please enter your name here