ಕಾಮಜಾಲು ಹಿ.ಪ್ರಾ ಶಾಲೆಯಲ್ಲಿ ನೂತನ ಕಂಪ್ಯೂಟರ್ ಉದ್ಘಾಟನೆ

0

ವಿಟ್ಲ:ಮಾಣಿಲ ಗ್ರಾಮದ ಕಾಮಜಾಲು ಹಿ.ಪ್ರಾ ಶಾಲೆಯಲ್ಲಿ ಧಾನಿಗಳ ನೆರವಿನಿಂದ ಖರೀದಿಸಿದ ನೂತನ ಕಂಪ್ಯೂಟರ್ ಹಾಗೂ ಪ್ರಿಂಟರ್ ಅನ್ನು ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಧರ್ ಬಾಳೆಕಲ್ಲುರವರು ಉದ್ಘಾಟಿಸಿದರು.


ವೇದಿಕೆಯಲ್ಲಿ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಆಡಳಿತ ಮುಕ್ತೆಸರರಾದ ಎಂಕೆ ಕುಕ್ಕಾಜೆ, ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಸುಂದರ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಪ್ರಭಾರ ಮುಖ್ಯ ಗುರುಗಳಾದ ಸುಧಾ ಕುಮಾರಿ ಕೆ.ರವರು ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕಿಯರಾದ ಜ್ಞಾನದೀಪ, ಮಾಲತಿ ಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ಚೈತ್ರ ವಂದಿಸಿದರು.

LEAVE A REPLY

Please enter your comment!
Please enter your name here