ವಲಯ ಮಟ್ಟದ ಕ್ರೀಡಾಕೂಟ:ಕಾವು ಬುಶ್ರಾ ಆ. ಮಾ. ಶಾಲೆಗೆ ಸಮಗ್ರ ಪ್ರಶಸ್ತಿ

0

ಪುತ್ತೂರು : ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಪುತ್ತೂರು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಕಾವು ಬುಶ್ರಾ ಆಂಗ್ಲ ಮಾಧ್ಯಮ ಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಅಲ್ಲದೆ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮಿತೇಶ್ ನಾಯ್ಕ್ ಹಾಗೂ 8 ನೇ ತರಗತಿ ಬಾಲಕರ ವಿಭಾಗದಲ್ಲಿ ಮಹಮ್ಮದ್ ರುವೈಶ್ ವೈಯುಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿದರು. ಮುಂದೆ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಈ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಇವರಿಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ನೆಟ್ಟಾರ್ ತರಬೇತಿ ನೀಡಿದರು. ಕ್ರೀಡಾಕೂಟದಲ್ಲಿ ಸಂಸ್ಥೆಯ ಶಿಕ್ಷಕರಾದ ಪ್ರದೀಪ್ , ಉಮೇಶ್ , ಚೇತನಾ , ಸಹಕರಿಸಿದರು.

LEAVE A REPLY

Please enter your comment!
Please enter your name here