ಅ.12:ಬಿಸಿರೋಡ್ ನಲ್ಲಿ ದ.ಕ. ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಷೇರು ಪ್ರಮಾಣ ಪತ್ರ ವಿತರಣೆ, ಕೃಷಿ ಮಾಹಿತಿ ಕಾರ್ಯಾಗಾರ

0

ಪುತ್ತೂರು: ದ.ಕ. ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆ ವತಿಯಿಂದ ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ ಷೇರು ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಅ.12ರಂದು ಬಿಸಿರೋಡು ಗೀತಾoಜಲಿ ಸಭಾಭವನದಲ್ಲಿ ನಡೆಯಲಿದೆ. ಬಿಳಿನೆಲೆ ಕಿದು ಸಿ ಪಿ ಸಿ ಆರ್ ಐ ಸಂಶೋಧನಾ ಕೇಂದ್ರದ ವಿಜ್ಞಾನಿ ದಿವಾಕರ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ.


ಬಂಟ್ವಾಳ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಚೋ ಪ್ರದೀಪ್ ಡಿಸೋಜ, ರಾಜ್ಯ ರೈತ ಸಂಘ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಮನೋಹರ್ ಶೆಟ್ಟಿ, ರಾಜ್ಯ ರೈತ ಸಂಘದ ದ.ಕ. ಜಿಲ್ಲಾಧ್ಯಕ್ಷ ಒಸ್ವಾಲ್ಡ್ ಫೆರ್ನಾಂಡಿಸ್ ಹಾಗೂ ರಾಜ್ಯ ರೈತ ಸಂಘದ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ ಶೆಟ್ಟಿ ಬಾಳ್ತಿಲ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷ ಕುಸುಮಾಧರ್ ಎಸ್.ಕೆ. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here