ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸರ್ವೋತ್ತಮ ಗೌಡ ನೇಮಕ

0

ನೆಲ್ಯಾಡಿ: ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಸರ್ವೋತ್ತಮ ಗೌಡ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅ.10ರಂದು ಆದೇಶಿಸಿದ್ದಾರೆ.
ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಹೊಸಮನೆ ನಿವಾಸಿಯಾಗಿರುವ ಸರ್ವೋತ್ತಮ ಗೌಡ ಅವರು ಜಿ.ಪಂ.ಮಾಜಿ ಸದಸ್ಯರು, ತಾ.ಪಂ.ಮಾಜಿ ಸದಸ್ಯರೂ ಆಗಿದ್ದಾರೆ. ತಕ್ಷಣ ಕಡಬ ಬ್ಲಾಕ್ ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here