ಕೆಡೆನ್ಸ್ ಡಿಸೈನ್ ಸಿಸ್ಟಮ್ಸ್ ಸಂಸ್ಥೆಗೆ ಆಯ್ಕೆಯಾದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಧನ್ಯ ಪಿ

0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿನಿ ಧನ್ಯ.ಪಿ ಕೆಡೆನ್ಸ್ ಡಿಸೈನ್ ಸಿಸ್ಟಮ್ಸ್ (Cadence Design Systems)ಸಂಸ್ಥೆಗೆ ಆಯ್ಕೆಯಾಗಿದ್ದಾರೆ.

2024ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯನ್ವಯ ಸೆ. 30 ಹಾಗೂ ಅ.1 ರಂದು ನಡೆದ ನೇಮಕಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿ ಇವರು ಆಯ್ಕೆಯಾಗಿದ್ದಾರೆ. ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ಕ್ಷೇತ್ರದ ದಿಗ್ಗಜ ಕೆಡೆನ್ಸ್ ಡಿಸೈನ್ ಸಿಸ್ಟಮ್ಸ್ ಸಂಸ್ಥೆಯು ಕಾಲೇಜಿಗೆ ಭೇಟಿ ನೀಡಿತ್ತು. ಈ ನೇಮಕಾತಿ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 14 ಇಂಜಿನಿಯರಿಂಗ್ ಕಾಲೇಜುಗಳ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ 470 ಅರ್ಹ ವಿದ್ಯಾರ್ಥಿಗಳು ಭಾಗವಹಿಸಿದರು. ಒಟ್ಟು ಏಳು ಸುತ್ತಿನಲ್ಲಿ ಆಯ್ಕೆ ಪ್ರಕ್ರಿಯೆಯು ನಡೆದಿದ್ದು ಅಂತಿಮವಾಗಿ ಇಬ್ಬರು ಆಯ್ಕೆಯಾಗಿದ್ದಾರೆ. ವಾರ್ಷಿಕ 15 ಲಕ್ಷ ರೂಪಾಯಿ ವೇತನ ನೀಡುವ ಹುದ್ದೆಗೆ ನಡೆದ ನೇಮಕಾತಿ ಇದಾಗಿದೆ. ಕಾಲೇಜಿನ ಎಲ್ಲಾ ವಿಭಾಗಗಳಿಗೂ ಅನ್ವಯವಾಗುವಂತೆ ಮುಂದಿನ ದಿನಗಳಲ್ಲಿ ಅನೇಕ ಹೆಸರಾಂತ ಕಂಪೆನಿಗಳು ಕ್ಯಾಂಪಸ್ ನೇಮಕಾತಿಗಾಗಿ ಕಾಲೇಜಿಗೆ ಭೇಟಿ ನೀಡಲಿವೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here