ಜನನ ಮತ್ತು ಮರಣ ನೋಂದಣಿಗೆ ಆಧಾರ್ ಕಡ್ಡಾಯವಲ್ಲ- ದ.ಕ.ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ್ ಕೆ.

0

ಮಂಗಳೂರು: ಜನನ ಮತ್ತು ಮರಣ ನೋಂದಣಿಯಲ್ಲಿ ಯಾವುದೇ ವಿಳಂಬ ಸಲ್ಲದು. ಜನಸಾಮಾನ್ಯರನ್ನು ಸತಾಯಿಸಲೂ ಬಾರದು. ಇ-ಜನ್ಮತಂತ್ರಾಂಶದಲ್ಲಿ ನೋಂದಣಿಯಾಗುವ ಮರಣಗಳಿಗೆ ಸಂಬಂಧಿಸಿ ಕಾರಣಗಳನ್ನು ಸರಿಯಾಗಿ ನಮೂದಿ ಸಬೇಕು. ಅಲ್ಲದೆ ಜನನ ಮತ್ತು ಮರಣ ನೋಂದಣಿಗೆ ಆಧಾರ್ ಕಡ್ಡಾಯವಲ್ಲ. ಬೇರೆ ದಾಖಲೆಗಳನ್ನು ಕೂಡ ಬಳಸಬಹುದಾಗಿದೆ. ಗ್ರಾಮ ಒನ್ ಕಚೇರಿಯಲ್ಲಿ ಕೂಡ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು ಎಂದು ದ.ಕ.ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ್‌ ಕೆ. ಹೇಳಿದರು.

ದ.ಕ. ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜನನ-ಮರಣ ನೋಂದಣಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಸೆಕ್ಷನ್ 18ರ ಪ್ರಕಾರ ಜಿಲ್ಲೆಯ ಎಲ್ಲಾ ನೋಂದಣಿ ಘಟಕವು ನಿಯಾಮಾನುಸಾರ ನೋಂದಣಿ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಹಾಗೂ ಶೇ.100ರಷ್ಟು ಘಟನೆಗಳು ದಾಖಲಾತಿಯಾಗಿರುವ ಬಗ್ಗೆ ಪರಿಶೀಲನೆಯನ್ನು ಕಂದಾಯ ಇಲಾಖೆ, ನಗರ ಅಭಿವೃದ್ಧಿ ಸಾಂಖ್ಯಿಕ ಇಲಾಖೆ ಅಧಿಕಾರಿಗಳು ನಡೆಸಬೇಕು. ಪರಿಶೀಲನಾ ವರದಿಯನ್ನು ಪ್ರತಿ ತ್ರೈಮಾಸಿಕಕ್ಕೆ ಕಳುಹಿಸಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here