ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಗೆ ನೇಮಕ

0

ಪುತ್ತೂರು: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸುವ ನಿಟ್ಟಿನಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ 16 ಮಂದಿಯನ್ನು ಒಳಗೊಂಡಿರುವ ನೂತನ ಸಮಿತಿಯನ್ನು ದ.ಕ ಜಿಲ್ಲಾ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ನೇಮಕ ಮಾಡಿ ಆದೇಶಿಸಿದೆ.

ಸಮಿತಿ ಅಧ್ಯಕ್ಷರಾಗಿ ಎಪಿಎಂಸಿ ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಕಾರ್ಯಾಧ್ಯಕ್ಷರಾಗಿ ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪ್ರಧಾನ ಕಾರ್ಯದರ್ಶಿಯಾಗಿ ಬಾಲಚಂದ್ರ ಗೌಡ ದೇವಸ್ಯ, ಕೋಶಾಧಿಕಾರಿಯಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಆರ‍್ಯಾಪು, ಜತೆ ಕಾರ್ಯದರ್ಶಿಯಾಗಿ ಗಿರೀಶ್ ಕಿನ್ನಿಜಾಲು, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಕಂಬಳತ್ತಡ್ಡ, ಆರ್ಯಪು ಗ್ರಾ.ಪಂ ಮಾಜಿ ಅಧ್ಯಕ್ಷ ವಿಜಯ ಬಿ.ಎಸ್ ಸಂಪ್ಯ, ನಾರಾಯಣ ನಾಯ್ಕ ಗೆಣಸಿನ ಕುಮೇರು, ಎಂಆರ್‌ಪಿಎಲ್‌ನ ಸೀತಾರಾಮ ರೈ ಕೈಕಾರ, ಸದಸ್ಯ ಕಾರ್ಯದರ್ಶಿಯಾಗಿ ಸುರೇಶ್ ಪೆಲತ್ತಡಿ, ಸದಸ್ಯರಾಗಿ ನ್ಯಾಯವಾದಿ ವಿರೂಪಾಕ್ಷ ಭಟ್ ಮಚ್ಚಿಮಲೆ, ಎಂ. ಹರಿಣ ವಸಂತ ರೈ ಮೇರ್ಲ, ಆರ್ಯಾಪು ಗ್ರಾ.ಪಂ ಸದಸ್ಯ ಹರೀಶ್ ನಾಯಕ್ ಬಳಕ್ಕ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದೇವಯ್ಯ ಗೌಡ ದೇವಸ್ಯ, ದಾಮೋದರ ರೈ ತೊಟ್ಲ, ಕಿಶೋರ ಗೌಡ ಮರಿಕೆಯವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.


ದೇವಳದ ಸುತ್ತು ಪೌಳಿ, ಅಡುಗೆಕೋಣೆ, ನಾಗನಕಟ್ಟೆ ದೇವಳದ ಎದುರಿನ ತೋಡಿಗೆ ತಡೆಗೋಡೆ ಇತ್ಯಾದಿ ಕಾಮಗಾರಿಗಳನ್ನು ನಡೆಸಲು ತಿರ್ಮಾನಿಸಿ ೧೬ ಜನರನ್ನೊಳಗೊಂಡ ಜೀರ್ಣೋದ್ಧಾರ ಸಮಿತಿ ರಚಿಸಿ ಅದರ ಮಂಜೂರಾತಿಗೆ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿತ್ತು.

LEAVE A REPLY

Please enter your comment!
Please enter your name here