ಅ.12ರಿಂದ ಅ.18ರವರೆಗೆ ಬಿಳಿನೆಲೆ ಕೈಕಂಬ ಶಾಲೆಯಲ್ಲಿ ಎನ್.ಎಸ್.ಎಸ್. ಶಿಬಿರ- ಉದ್ಘಾಟನೆ

0

ಕಡಬ: ಬಿಳಿನೆಲೆ ಕೈಕಂಬ ಶಾಲೆಯಲ್ಲಿ ಸುಬ್ರಹ್ಮಣ್ಯೇಶ್ವರ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಎನ್.ಎಸ್.ಎಸ್. ಶಿಬಿರವು ಅ.12ರಿಂದ ಅ.18ರವರೆಗೆ ನಡೆಯಲಿದ್ದು, ಅ.12ರಂದು
ಶಿಬಿರವನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋಹನ್ ಕಳಿಗೆ ಉದ್ಘಾಟಿಸಿ ಶುಭ ಹಾರೈಸಿದರು. ಬಿಳಿನೆಲೆ ಗ್ರಾ.ಪಂ. ಅಧ್ಯಕ್ಷೆ ಶಾರಾದ ದಿನೇಶ್ ಧ್ವಜಾರೋಹಣಗೈದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ರೇಖಾರಾಣಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಕನ್ನಡ ಭಾಷಾ ಉಪನ್ಯಾಸಕಿ ಭವ್ಯ ಕುಲ್ಕುಂದ, ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಸುಬ್ಬಪ್ಪ ಕೈಕಂಬ, ಬಿಳಿನೆಲೆ ಕೈಕಂಬ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಪವಿತ್ರ ಎ.ಎಸ್.ಎಸ್. ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಮಾವಿನಕಟ್ಟೆ, ಎಸ್.ಎಸ್.ಪಿ.ಯು.ನ ಹಿರಿಯ ವಿಧ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್. ಬಿಳಿನೆಲೆ ಗ್ರಾ.ಪಂ.ಸದಸ್ಯೆ ಭವ್ಯ ಕುಕ್ಕಾಜೆ, ಬಿಳಿನೆಲೆ ಗ್ರಾಮ ಆಡಳಿತಾಧಿಕಾರಿ ಶೃತಿ ಮೊದಲಾದವರು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಶಿಬಿರದ ಯೋಜನಾಧಿಕಾರಿ ಸೌಮ್ಯ ಸ್ವಾಗತಿಸಿ, ಆಂಗ್ಲ ಭಾಷಾ ಉಪನ್ಯಾಸಕಿ ಸವಿತಾಕೈಲಾಸ್ ವಂದನಾರ್ಪಣೆ ಸಲ್ಲಿಸಿದರು. ಶಿಭಿರಾಧಿಕಾರಿ ಪವನ್ ಕಾರ್ಯಕ್ರಮ ನಿರೂಪಿಸಿದರು

LEAVE A REPLY

Please enter your comment!
Please enter your name here