ಅ.15; ನಿಡ್ಪಳ್ಳಿ ದೇವಸ್ಥಾನದ ವಠಾರದಲ್ಲಿ ದಸರಾ ಪ್ರಯುಕ್ತ ವಿವಿಧ ಸ್ಪರ್ಧೆ

0

ನಿಡ್ಪಳ್ಳಿ; ನವರಾತ್ರಿ ಉತ್ಸವ ಸಮಿತಿ ಮತ್ತು ಆಡಳಿತ ಮಂಡಳಿ ಶ್ರೀ ಶಾಂತದುರ್ಗಾ ದೇವಸ್ಥಾನ ನಿಡ್ಪಳ್ಳಿ ಇದರ ವತಿಯಿಂದ ದೇವಸ್ಥಾನದ ವಠಾರದಲ್ಲಿ ಹಿಂದೂ ಬಾಂಧವರಿಗೆ ವಿವಿಧ ಸ್ಪರ್ಧೆಗಳು ಅ. 15 ರಂದು ನಡೆಯಲಿದೆ.ದೇವಸ್ಥಾನದ ಪ್ರಧಾನ ಅರ್ಚಕ ವೇದ ಮೂರ್ತಿ ನವೀನ ಹೆಬ್ಬಾರ್ ಇವರು ಮ್ಯಾರಥಾನ್ ಗೆ ಚಾಲನೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಸ್ಪರ್ಧೆಗಳು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗ, ಪುರುಷರು ಮತ್ತು ಮಹಿಳೆಯರಿಗೆ  ವಿವಿಧ ಸ್ಪರ್ಧೆಗಳು ನಡೆಯಲಿದೆ. ವಿಶೇಷವಾಗಿ 55 ಕೆ.ಜಿ  ವಿಭಾಗದ ಪುರುಷರ ಕಬಡ್ಡಿ ಪಂದ್ಯಾಟ ಹಾಗೂ ಪುರುಷ ಮತ್ತು ಮಹಿಳೆಯರಿಗೆ ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here