ಅ.15-23: ಬನ್ನೂರು ಕರ್ಮಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

0

ಪುತ್ತೂರು: ಬನ್ನೂರು ಕರ್ಮಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅ.15 ರಿಂದ ಅ.23 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಉತ್ಸವ ನಡೆಯಲಿದೆ. ಪ್ರತಿದಿನ ರಾತ್ರಿ 7 ಗಂಟೆಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಅ.15ರಂದು ಬೆಳಿಗ್ಗೆ 10.30 ಕ್ಕೆ ಶ್ರೀ ದೇವರ ಗದ್ದಿಗೆ ಏರುವುದು, ಅ.19ರಂದು ಸಂಜೆ 7 ಗಂಟೆಗೆ ಮೂಡಾಯೂರು ಬಳಗದವರಿಂದ ಸ್ಯಾಕ್ಸೋಫೋನ್ ವಾದನ, ಅ.23ರಂದು ಬೆಳಿಗ್ಗೆ 8.30 ಕ್ಕೆ ಕೊಪ್ಪರಿಗೆ ಏರುವುದು, 10.30 ರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಶ್ರೀ ದರ್ಶನ ಪಾತ್ರಿಯವರಿಂದ ಶ್ರೀ ದೇವಿ ದರ್ಶನ ಮತ್ತು ಅಭಯ ನುಡಿ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

LEAVE A REPLY

Please enter your comment!
Please enter your name here