ಕಾಣಿಯೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಸಾಂಸ್ಕೃತಿಕ ಸಮಿತಿಗಳ ನೇತೃತ್ವದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಏರ್ಪಡಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿಯ ಪ್ರಾಂಶುಪಾಲರಾದ ಪ್ರೊ.ಸುಬ್ಬಪ್ಪ ಕೈಕಂಬ ಭಾಗವಹಿಸಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮತ್ತು ವಿದ್ಯಾರ್ಥಿಗಳು ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು, ಕೂಡಿ ಬಾಳುವ ಧ್ಯೇಯಗಳನ್ನು ಹೊಂದಲು ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಶಂಕರ ಭಟ್ ವಹಿಸಿದ್ದರು. ವೇದಿಕೆಯಲ್ಲಿ ಐಕ್ಯುಎಸಿ ಸಂಚಾಲಕರಾದ ಸ್ವಾಮಿ.ಎಸ್ ಹಾಗೂ ಸಾಂಸ್ಕೃತಿಕ ಸಮಿತಿ ವಿದ್ಯಾರ್ಥಿ ಪ್ರತಿನಿಧಿಗಳಾದ ಸಚಿನ್ ತೃತೀಯ ಬಿಕಾಂ, ಕೀರ್ತನಾ ತೃತೀಯ ಬಿಎ ಮತ್ತು ಕ್ರೀಡಾ ಸಮಿತಿ ವಿದ್ಯಾರ್ಥಿ ಪ್ರತಿನಿಧಿಗಳಾದ ಕು.ಅಕ್ಷಯ ತೃತೀಯ ಬಿಬಿಎ, ತೇಜಸ್ ತೃತೀಯ ಬಿಕಾಂ ಉಪಸ್ಥಿತರಿದ್ದರು. ಸುಷ್ಮಿತಾ ಸ್ವಾಗತಿಸಿ, ಭವನ್ ವಂದಿಸಿದರು. ಕೀರ್ತನಾ ಕಾರ್ಯಕ್ರಮ ನಿರೂಪಿಸಿದರು.ಸಭಾ ಕಾರ್ಯಕ್ರಮದ ನಂತರ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು.