ಪಡುಮಲೆ ಮದಕ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಪ್ರಥಮ ಶ್ರೀ ಶರನ್ನವರಾತ್ರಿ ಮಹೋತ್ಸವ ಸಂಭ್ರಮ

0

ಬಡಗನ್ನೂರು: ಪಡುಮಲೆ ಮದಕ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಪ್ರಥಮ ವರ್ಷದ ಶ್ರೀ ಶರನ್ನವರಾತ್ರಿ ಮಹೋತ್ಸವ ಸಂಭ್ರಮದಿಂದ ಜರಗಲಿದೆ. ಅ.15 ರಿಂದ ಪ್ರಾರಂಭಗೊಂಡು ಅ. 23 ವರೆಗೆ 9 ದಿನಗಳ ಕಾಲ ಶ್ರೀ ರಾಜರಾಜೇಶ್ವರಿ ದೇವಿಗೆ ವಿಶೇಷ ಅಲಂಕಾರ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ವಿವಿಧ  ಭಜನಾ ಮಂಡಳಿ ಸದಸ್ಯರಿಂದ ಪ್ರತಿದಿನ ಭಜನಾ ಸಂಕೀರ್ತನೆ ನಡೆಯಲಿದ್ದು, ಭಕ್ತಾದಿಗಳಾದ ತಾವೆಲ್ಲರೂ ಆಗಮಿಸಿ ಶ್ರೀ ಸನ್ನಿಧಿಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಗಂಧ ಪ್ರಸಾದ ಸ್ವೀಕರಿಸಿ, ಶ್ರೀ ರಾಜರಾಜೇಶ್ವರಿ ದೇವಿಯ ಕೃಪೆಗೆ ಪಾತ್ರರಾಗುವಂತೆ ಸಮಿತಿ ಅಧ್ಯಕ್ಷ ಚಂದ್ರಶೇಖರ ಆಳ್ವ ಗಿರಿಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here