ಈಶ್ವರಮಂಗಲ: ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ 

0

ಬಡಗನ್ನೂರುಃ ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಪುತ್ತೂರು ಹಾಗೂ ಗ್ರಾಮ ಪಂಚಾಯತ್ ನೆಟ್ಟಣಿಗೆ ಮುಡ್ನೂರು ಮತ್ತು ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರ ಈಶ್ವರಮಂಗಲ ಇವರ ಸಹಯೋಗದಲ್ಲಿ ನಾಯಿಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಅ..14 ರಂದು ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ರಾಮ ಮೇನಾಲ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮಾಜಿ ಅಧ್ಯಕ್ಷ ರಮೇಶ್ ರೈ, ಸಾಂತ್ಯ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಕೊಳ್ತಿಗೆ ಪಶು ಚಿಕಿತ್ಸಾಲಯದ ಪಶುವೈದ್ಯಾಧಿಕಾರಿ ಡಾ.ಎಂ ಪಿ ಪ್ರಕಾಶ್‌ ಲಸಿಕೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಈಶ್ವರಮಂಗಲಹಿರಿಯ ಪಶು ಪರೀಕ್ಷಕರಾದ ಬಸವರಾಜ್, ಪುಂಡರೀಕ್ಷಾ, ಕುಮಾರ್ ಕೊಳ್ತಿಗೆ ಹಾಗೂ ಸಹಾಯಕಿ ಸರೋಜ, ಭರತ್, ಕೀರ್ತನ್, ಪಶುಸಖಿ ಕಾವ್ಯ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸುಮಾರು 400 ನಾಯಿಗಳಿಗೆ ಲಸಿಕೆ ನೀಡಲಾಯಿತು.

LEAVE A REPLY

Please enter your comment!
Please enter your name here