ಪುತ್ತೂರು: ಈ ಬಾರಿ ಶಾರದೋತ್ಸವವನ್ನು ಅದ್ದೂರಿಯಿಂದ ಆಚರಿಸುವ ಸಲುವಾಗಿ ಉತ್ಸವ ಸಮಿತಿಯನ್ನು ರಚಿಸಲಾಗಿದ್ದು ಕಾರ್ಯಕ್ರಮದಂತೆ ಅ.೧೫ರಂದು ನವರಾತ್ರಿ ಆರಂಭಗೊಂಡಿದೆ. ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಬೆಳಿಗ್ಗೆ ಸಮಿತಿ ವತಿಯಿಂದ ಪ್ರಾರ್ಥನೆಯೊಂದಿಗೆ ನವರಾತ್ರಿ ಉತ್ಸವ ಆರಂಭಗೊಂಡಿತು. ಮಂದಿರದ ಅರ್ಚಕ ಹರಿಪ್ರಸನ್ನ ಸರೋಳಿತ್ತಾಯ ಪ್ರಾರ್ಥಿಸಿ, ಪೂಜೆ ನೆರವೇರಿಸಿದರು. ಬಳಿಕ ಸಮಿತಿ ಪದಾಧಿಕಾರಿಗಳು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಲಕ್ಷ್ಮೀ ವೆಂಕಟರಮಣ ದೇವಸ್ಥಾನ, ಮಹಾಮ್ಮಾಯಿ ದೇವಸ್ಥಾನ ಹಾಗೂ ಬಲ್ನಾಡು ದಂಡನಾಯಕ ಉಳ್ಳಾಳ್ತಿ ದೈವಸ್ಥಾನಕ್ಕೆ ತೆರಳಿ ೯ ದಿನಗಳ ನವರಾತ್ರಿ ಉತ್ಸವ, ಶಾರದೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುವಂತೆ ಪ್ರಾರ್ಥಿಸಲಾಯಿತು,
ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಮಂದಿರದ ಅಧ್ಯಕ್ಷ ಸಾಯಿರಾಮ ರಾವ್, ಉತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಬನ್ನೂರು, ಶೋಭಾಯಾತ್ರೆ ಸಂಚಾಲಕ ಸೀತಾರಾಮ ರೈ ಕೆದಂಬಾಡಿಗುತ್ತು, ಉತ್ಸವ ಸಮಿತಿ ಸಂಚಾಲಕ ಪಿ.ಜಿ. ಜಗನ್ನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಅಜಿತ್ ರೈ ಹೊಸಮನೆ ಮಂದಿರದ ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಕೋಶಾಧಿಕಾರಿ ತಾರನಾಥ್ ಹೆಚ್. ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.