ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದ ನವರಾತ್ರಿ ಉತ್ಸವ ಅ.15ರಿಂದ ಆರಂಭಗೊಂಡಿದ್ದು, ಬೆಳಿಗ್ಗೆ ಭಜನಾ ಮಂದಿರ, ದೇವಸ್ಥಾನ, ದೈವಸ್ಥಾನದಲ್ಲಿ ಎಲ್ಲಾ ಕಾರ್ಯಗಳು ನಿರ್ವಿಘ್ನವಾಗಿ ನೆರವೇರುವಂತೆ ಪ್ರಾರ್ಥಿಸಲಾಯಿತು. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಮಾಡಲಾಗಿದ್ದು, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಮಾಜಿ ಶಾಸಕ ಸಂಜೀವ ಮಠಂದೂರು ಸಂದರ್ಭೋಚಿತವಾಗಿ ಮಾತನಾಡಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು. ಪ್ರಾರ್ಥನಾ, ಕು. ಆರಾಧನ ಬಂಗಾರಡ್ಕ ಹಾಗೂ ಬಳಗದವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ನಡೆಯಿತು.