ಕೃಷಿ ಸಚಿವ ಚೆಲುವರಾಯ ಸ್ವಾಮಿ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

0

ಕಡಬ : ಕರ್ನಾಟಕದ ಸರ್ಕಾರದ ಕೃಷಿ ಸಚಿವ ಚೆಲುವರಾಯ ಸ್ವಾಮಿ ದಂಪತಿ ಅ.15 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ದಕ್ಷಿಣ ಕನ್ನಡದಲ್ಲಿ ಅಡಿಕೆ ಕೃಷಿಗೆ ಎದುರಾಗಿರುವ ಎಲೆ ಚುಕ್ಕಿ ರೋಗಕ್ಕೆ ಈ ಬಾರಿಯ ಬಜೆಟ್ ನಲ್ಲಿ ಪರಿಹಾರ ಧನ ಮೀಸಲಿಡುವ ಬಗ್ಗೆ ಗಮನ ಹರಿಸುವುದಾಗಿ ಹೇಳಿದರು. ಅಲ್ಲದೆ ಅಡಿಕೆಗೆ ಭಾದಿಸಿರುವ ರೋಗಕ್ಕೆ ಶಿವಮೊಗ್ಗದ ಕೃಷಿ ತಜ್ಞರಿಂದ 10 ದಿವಸಗಳಲ್ಲಿ ಮಾಹಿತಿ ಪಡೆಯುವುದಾಗಿ ತಿಳಿಸಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಾಜಿ ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆ, ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಮನೋಜ್ ನಾಗರಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here