ನೆಲ್ಯಾಡಿ: ಸಂತ ಜಾರ್ಜ್ ಪ.ಪೂ.ಕಾಲೇಜಿನ ಎನ್‌ ಎಸ್‌ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

0

ನೆಲ್ಯಾಡಿ: ಇಲ್ಲಿನ ಸಂತ ಚಾರ್ಜ್ ಪದವಿ ಪೂರ್ವ ಕಾಲೇಜಿನ ಎನ್‌ ಎಸ್‌ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಅ.15ರಂದು ಉದ್ಘಾಟನೆಗೊಂಡಿತು.


ಸಂತ ಜಾರ್ಜ್ ವಿದ್ಯಾ ಸಂಸ್ಥೆಯ ಸಂಚಾಲಕ ರೆ. ಫಾ.ನೋಮಿಸ್ ಕುರಿಯಾಕೋಸ್ ರವರು ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಬೆಸೆಂಟ್ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ. ಗಿರಿಯಪ್ಪ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸಂತ ಜಾರ್ಜ್ ವಿದ್ಯಾಸಂಸ್ಥೆಯ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಇಸ್ಮಾಯಿಲ್ ಎನ್. ಮಾತನಾಡಿ, ಎನ್‌ ಎಸ್‌ ಎಸ್ ವಿದ್ಯಾರ್ಥಿಗಳ ಸರ್ವೋತೋಮುಖ ಅಭಿವೃದ್ಧಿಗೆ ಬಹಳ ಅವಶ್ಯಕ ಎಂದು ನುಡಿದರು. ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷ ಸತೀಶ್. ಕೆ. ಎಸ್. ರವರು ಮಾತನಾಡಿ, ಎನ್‌ ಎಸ್‌ ಎಸ್ ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳನ್ನು ಕಲಿಸುತ್ತದೆ ಎಂದು ನುಡಿದರು. ನೆಲ್ಯಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಜಯಾನಂದ ಬಂಟ್ರಿಯಾಲ್ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನ ರಾಷ್ಟ್ರೀಯ ಅಧಿಕಾರಿಯಾದ ಡಾ.ಸದಾನಂದ ಕುಂದರ್ ಶುಭವನ್ನು ಹಾರೈಸಿದರು. ಸಂತ ಜಾರ್ಜ್ ಪ್ರೌಢ ಶಾಲೆಯ ನಿವೃತ್ತ ಮುಖ್ಯಗುರು ರವೀಂದ್ರ ಟಿ. ಅವರು ರಾಷ್ಟ್ರೀಯ ಸೇವಾ ಯೋಜನೆಯ ಪ್ರಯೋಜನಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಸಂತ ಜಾರ್ಜ್ ಪ. ಪೂ. ಕಾಲೇಜಿನ ಪ್ರಾಚಾರ್ಯ ಏಲಿಯಾಸ್. ಎಂ. ಕೆ ಎನ್‌ ಎಸ್‌ ಎಸ್ ನಿಂದ ವಿದ್ಯಾರ್ಥಿಗಳಿಗೆ ಶಿಸ್ತುಬದ್ದ ಜೀವನವನ್ನು ನಡೆಸುವ ತರಬೇತಿ ಸಿಗುವುದು ಎಂದು ನುಡಿದರು. ವೇದಿಕೆಯಲ್ಲಿ ಸಂತ ಜಾರ್ಜ್ ವಿದ್ಯಾಸಂಸ್ಥೆ ಗಳ ಆಡಳಿತ ಮಂಡಳಿಯ ಕೋಶಾಧಿಕಾರಿ ಎ. ಎ. ಅಬ್ರಹಾಂ, ನೆಲ್ಯಾಡಿ ವರ್ತಕ ಸಂಘದ ಅಧ್ಯಕ್ಷ ರಫೀಕ್ ಸೀಗಲ್, ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನೆಲ್ಯಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಯಾಕೂಬ್ ಯಾನೆ ಸಲಾಂ ಬಿಲಾಲ್, ಸಂತ ಜಾರ್ಜ್ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು ಸರೋಜ ಕುಮಾರಿ,ಎನ್‌ ಎಸ್‌ ಎಸ್ ಘಟಕದ ನಾಯಕ ಮೋಹನ ಕುಮಾರ್, ನಾಯಕಿ ಕಾವ್ಯ, ಅಧ್ಯಾಪಕ ವೃಂದ, ಶಿಬಿರಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದರು. ಐಶ್ವರ್ಯ ಮತ್ತು ಬಳಗದವರು ಎನ್‌ ಎಸ್‌ ಎಸ್ ಗೀತೆಯನ್ನು ಹಾಡಿದರು.ಎನ್‌ ಎಸ್‌ ಎಸ್ ಸಹಕಾರ್ಯಕ್ರಮಾಧಿಕಾರಿ ಮಧು ಎ. ಜೆ. ಸ್ವಾಗತಿಸಿದರು. ಸಹಕಾರ್ಯಕ್ರಮಾಧಿಕಾರಿ ಜೆಸಿಂತಾ. ಕೆ. ಜೆ. ವಂದಿಸಿದರು. ಎನ್‌ ಎಸ್‌ ಎಸ್ ಕಾರ್ಯಕ್ರಮಾಧಿಕಾರಿ ವಿಶ್ವನಾಥ ಶೆಟ್ಟಿ ಕೆ. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here