ಪರವೂರಿನಲ್ಲಿರುವ ಪುತ್ತೂರಿನವರು- ಮೈಸೂರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಅಬ್ದುಲ್ ರಹಿಮಾನ್ ಕಾವು

0

ಪುತ್ತೂರು: ಮೈಸೂರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾಗಿ ತಾಲ್ಲೂಕು ಮಾಡ್ನೂರು ಗ್ರಾಮದ ಕಾವು ನಿವಾಸಿ ಪ್ರೊ.ಅಬ್ದುಲ್ ರಹಿಮಾನ್‌ರವರು ಅಧಿಕಾರ ವಹಿಸಿಕೊಂಡಿದ್ದಾರೆ. ಕಾವು ದಿ. ಕೆ ಸೀದಿ ಕುಂಞ ಹಾಜಿ ಹಾಗು ಚೈನಾಬಿ ದಂಪತಿಯರ ನಾಲ್ಕನೇ ಪುತ್ರರಾಗಿರುವ ಪ್ರೊ, ಅಬ್ದುಲ್ ರಹಿಮಾನ್ ರವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾವು, ಪ್ರೌಢ ಶಿಕ್ಷಣವನ್ನು ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆ ಈಶ್ವರಮಂಗಲದಲ್ಲಿ ಮುಗಿಸಿ, ಪಿಯುಸಿ ಹಾಗೂ ಪದವಿ ವ್ಯಾಸಂಗವನ್ನು ಪುತ್ತೂರು ಸಂತ ಫಿಲೋಮಿನಾ ಕಾಲೇಜು ಇಲ್ಲಿ ಮಾಡಿರುತ್ತಾರೆ. ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗು ಡಾಕ್ಟರೇಟ್ ಪದವಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪಡೆದಿದ್ದಾರೆ.


1992ರಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಆಯ್ಕೆಯಾಗಿ ಸರ್ಕಾರಿ ವಿಜ್ಞಾನ ಕಾಲೇಜು ಹಾಸನ ಇಲ್ಲಿ ರಸಾಯನ ಶಾಸ್ತ್ರದ ಉಪನ್ಯಾಸಕನಾಗಿ ವೃತ್ತಿ ಜೀವನ ಆರಂಭಿಸಿ ನಂತರ 2007ರಲ್ಲಿ ಸಹಪ್ರಾಧ್ಯಾಪಕರಾಗಿ, ಡಿಸೆಂಬರ್ 2022 ರಲ್ಲಿ ಪ್ರಾಧ್ಯಾಪಕರಾಗಿ ಪದೋನ್ನತಿ ಹೊಂದಿದರು. ಕಳೆದ ವರ್ಷ ಮೈಸೂರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿಗೆ ವರ್ಗವಾಗಿ ಈಗ ಪ್ರಾಂಶುಪಾಲರಾಗಿರುತ್ತಾರೆ.


ಪ್ರೊ. ಅಬ್ದುಲ್ ರಹಿಮಾನ್ ರವರು ಸುಮಾರು 20ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ರಾಷ್ಟ್ರೀಯ ಹಾಗು ಅಂತರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟಿಸಿ ಸುಮಾರು 25ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ವಿವಿಧ ಸೆಮಿನಾರ್ ಗಳಲ್ಲಿ ಮಂಡಿಸಿರುತ್ತಾರೆ. ಹಲವಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿಯೂ ಕೂಡ ತೊಡಗಿಸಿಕೊಂಡಿರುತ್ತಾರೆ. ಇವರ ಇಬ್ಬರು ಪುತ್ರಿಯರಾದ ಆಯಿಷ ಅಮ್ರತ್ ಹಾಗೂ ಫಾತಿಮ್ ಅಫ್ರತ್‌ರವರು ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ. ಪತ್ನಿ ಗುಲ್ಸನ್‌ರವರೊಂದಿಗೆ ಪ್ರಸ್ತುತ ಮೈಸೂರಿನಲ್ಲಿ ವಾಸ್ತ್ರವ್ಯ ಹೊಂದಿದ್ದಾರೆ.

LEAVE A REPLY

Please enter your comment!
Please enter your name here