ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ-ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಭುವನ್‌ರಾಮ್ ಗೆ ಚಿನ್ನ

0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಭುವನ್‌ರಾಮ್ ಜಗದೀಶ್ ಭಂಡಾರಿ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ಭಾರ ಎತ್ತುವ ಸ್ಪರ್ಧೆಯಲ್ಲ್ಲಿ ಚಿನ್ನದ ಪದಕವನ್ನು ಗಳಿಸಿಕೊಂಡಿದ್ದಾರೆ.
ಮೈಸೂರಿನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್‌ರಾಮ್ 73 ಕೆಜಿ ವಿಭಾಗದಲ್ಲಿ ಈ ಸಾಧನೆಯನ್ನು ಮಾಡಿದ್ದಾರೆ.ಇವರು ಪುತ್ತೂರಿನ ಜಗದೀಶ್ ಭಂಡಾರಿ ಹಾಗೂ ನಯನಾ ಭಂಡಾರಿ ಇವರ ಪುತ್ರ.
ಇವರಿಗೆ ಕಾಲೇಜಿನ ದೈಹಿಕಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಭಾರತೀಯ ಬಾರ್ಡರ್ ಸೆಕ್ಯೂರಿಟಿ ಫೋರ್ಸ್‌ನ ವಿಶ್ರಾಂತ ಯೋಧ ಹಾಗೂ ರಾಷ್ಟ್ರೀಯ ವೈಟ್‌ಲಿಫ್ಟರ್ ಪುಷ್ಪರಾಜ್ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ..

LEAVE A REPLY

Please enter your comment!
Please enter your name here