ನರಿಮೊಗರು ಪ್ರಾ.ಕೃ.ಪ ಸಹಕಾರ ಸಂಘದಿಂದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ.ಯ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

0

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ವತಿಯಿಂದ ಸಂಘದ ವ್ಯಾಪ್ತಿಯ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಅಭಿನಂದನಾ ಕಾರ್ಯಕ್ರಮ ಅ.15ರಂದು ಸಂಘದ ರೈತಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಿ. ಬಾಬುಶೆಟ್ಟಿ, ಉಪಾಧ್ಯಕ್ಷೆ ಲತಾಮೋಹನ ಗೌಡ ಪಾದೆ, ಆಡಳಿತ ಮಂಡಳಿಯ ನಿರ್ದೇಶಕರುಗಳು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಧುಕರ ಹೆಚ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here