
ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ, ಶಾರದೋತ್ಸವದ ಅಂಗವಾಗಿ 2ನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮ ಅ.16ರಂದು ಸಂಜೆ ಮಂದಿರದ ವಠಾರದಲ್ಲಿ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿತ್ಯಕರಸೇವಕರ ತಂಡದಿಂದ ಕಾರ್ಯಕ್ರಮದ ಉದ್ಘಾಟನೆ ಮಾಡಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಖುಷಿ ಅನಿಲ್ ದೇವಾಡಿಗ ಉರ್ಲಾಂಡಿ ಪುತ್ತೂರುರವರಿಂದ ದಾಸ ಸಾಹಿತ್ಯ ಗಾನ ಬಳಿಕ ಯಕ್ಷಶ್ರೀ ಹವ್ಯಾಸಿ ಬಳಗ ಪುತ್ತೂರು ಇವರಿಂದ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ ನಡೆಯಿತು. ಉತ್ಸವ ಸಮಿತಿ ಸಂಚಾಲಕ ಪಿ.ಜಿ. ಜಗನ್ನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು. ಮಂದಿರದ ಪದಾಧಿಕಾರಿಗಳು, ಉತ್ಸವ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.