ಅಕ್ಸಲರೇಟ್ ಇಂಡಿಯಾ ಫೌಂಡೆಶನ್ ಟ್ರಸ್ಟ್, ಸುಪ್ರಜಿತ್ ಫೌಂಡೇಶನ್ ಬೆಂಗಳೂರು ಇವರ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

0

ಪುತ್ತೂರು: ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ದಕ್ಷಿಣ ಕನ್ನಡ ಜಿಲ್ಲೆ ಹಾಗು ಅಕ್ಸಲರೇಟ್ ಇಂಡಿಯಾ ಫೌಂಡೆಶನ್ ಟ್ರಸ್ಟ್, ಸುಪ್ರಜಿತ್ ಫೌಂಡೇಶನ್ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಮಂಗಳೂರಿನಲ್ಲಿ ಕೊವಿಡ್ ನಿಂದ ಏಕಪೋಷಕ ಮತ್ತು ದೀಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಅ.14ರಂದು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪಿಯುಸಿ, ಪದವಿ ತರಗತಿಗಳಲ್ಲಿ ಒದುತ್ತಿರುವ ಸುಮಾರು 20ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು.

ಈ ಕಾರ್ಯಕ್ರಮದ ಅಧ್ಯಕ್ಷ ಆಕ್ಸಲರೇಟ್ ಇಂಡಿಯಾ ಫೌಂಡೇಶನ್ ಟ್ರಸ್ಟ್, ಕಾರ್ಯದರ್ಶಿ ವಿಠ್ಠಲ್ ದಾಸ್ ಕಾಮತ್ ಮಾತನಾಡಿ ನಮ್ಮ ಸಂಸ್ಥೆಯು ಕಳೆದ ಐದು ವರ್ಷಗಳಿಂದ ವಿವಿಧ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಕೋವಿಡ್ ಮಹಾಮಾರಿ ನಂತರ ನಾವು ಮುಖ್ಯವಾಗಿ ಮಕ್ಕಳ ವಿದ್ಯಾಭ್ಯಾಸದ ಮೇಲೆ ಗಮನಹರಿಸಿದ್ದೇವೆ, ಅದರ ಸಲುವಾಗಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನಾವು ಸಹಾಯಧನವನ್ನು ನೀಡುತ್ತಿದ್ದೇವೆ ಎಂದರು.

ನಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಕುಮಾರ್ ಶೆಟ್ಟಿಗಾರ್ ಮಾತನಾಡಿ ಆಕ್ಸಲರೇಟ್ ಇಂಡಿಯಾ ಫೌಂಡೇಶನ್ ಟ್ರಸ್ಟ್ ಸಂಸ್ಥೆಯ ಸಹಾಯಧನವನ್ನು ವ್ಯರ್ಥ ಮಾಡದೆ ನಿಮ್ಮ ವಿದ್ಯಾಭ್ಯಾಸಕ್ಕಾಗಿ ಉಪಯೋಗಿಸಿಕೊಳ್ಳಬೇಕು ಎಂದರು. ಸಿಸ್ಟರ್ ದುಲ್ಸಿನ್ ರವರು ಮಾತನಾಡಿ ಎಲ್ಲಾ ಮಕ್ಕಳು ಜೀವನದಲ್ಲಿ ಉತ್ತಮ ಸಂವಹನ ಕೌಶಲ್ಯ ಹಾಗೂ ಜೀವನ ಕೌಶಲ್ಯ ಅಂಶಗಳನ್ನು ಅಳವಡಿಸಿಕೊಂಡು ಒಳ್ಳೆಯ ಪ್ರಜೆಗಳಾಗಬೇಕು ಎಂದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಕ್ಸಲರೇಟ್ ಇಂಡಿಯಾ ಫೌಂಡೇಶನ್ ಸಂಸ್ಥೆಯ ಮಾರ್ಗದರ್ಶಕರದ ರವಿಶಂಕರ್, ಚೇತನ್, ದಿನೇಶ್,ನಂತರ ಸುಪ್ರಜಿತ್ ಫೌಂಡೇಶನ್ ಸಂಯೋಜಕ ರವಿಕುಮಾರ್ ಮಾತನಾಡಿ ಸುಪ್ರಜಿತ್ ಫೌಂಡೇಶನ್ ಸಂಸ್ಥಾಪಕ ಕೆ ಅಜಿತ್ ಕುಮಾರ್ ರೈ ಮತ್ತು ಕಾರ್ಯದರ್ಶಿ ಭಾರ್ಗವಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here