ಬಿಸಿಎಂ, ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ

0

ಪುತ್ತೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾರಾಡಿಯಲ್ಲಿರುವ ವಿದ್ಯಾರ್ಥಿ ನಿಲಯ ಹಾಗೂ ಬನ್ನೂರಿನಲ್ಲಿರು ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ಅ.16ರಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಭೇಟಿ ನೀಡಿದರು.
ವಿದ್ಯಾರ್ಥಿ ನಿಲಯಗಳನ್ನು ಪರಿಶೀಲನೆ ನಡೆಸಿದ ಉಸ್ತುವಾರಿ ಕಾರ್ಯದರ್ಶಿಯವರು ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ, ಪ್ರಭಾರ ಜಿಲ್ಲಾಧಿಕಾರಿಯಾಗಿರುವ ಡಾ. ಆನಂದ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಾಲತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಚಿನ್ ಕುಮಾರ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ನಗರ ಸಭಾ ಪೌರಾಯುಕ್ತ ಮಧು ಎಸ್ ಮನೋಹರ್, ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಕೃಷ್ಣ ಬಿ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ರಾಜ್‌ಗೋಪಾಲ್ ಹಾಗೂ ವಿದ್ಯಾರ್ಥಿ ನಿಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here