ಉಪ್ಪಿನಂಗಡಿ: ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯುವ ರಾಷ್ಟ್ರೀಯ ಸೇವಾ ಯೋಜನಾ ಶಿಬಿರ ಅ.16ರಂದು ಕೆಮ್ಮಾರ ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ಉದ್ಘಾಟನೆಗೊಂಡಿತು.
ಉಪ್ಪಿನಂಗಡಿ ಪೂರ್ವ ರೋಟರಿ ಕ್ಲಬ್ ಅಧ್ಯಕ್ಷ ಡಾ.ರಾಜಾರಾಂ ಕೆ.ಬಿ.ಉದ್ಘಾಟಿಸಿ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಹಿರೆಬಂಡಾಡಿ ಗ್ರಾ.ಪಂ.ಸದಸ್ಯೆ ವಾರಿಜಾಕ್ಷಿಯವರು ಶುಭಹಾರೈಸಿದರು. ಅತಿಥಿಯಾಗಿದ್ದ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್.ಅವರು ಮಾತನಾಡಿ, ತಂದೆ,ತಾಯಿ,ಗುರುಗಳು ಮಕ್ಕಳ ಕುರಿತು ಹೊಂದಿರುವ ಆಶಾಭಾವನೆಯ ಬಗ್ಗೆ ತಿಳಿಸಿದರು. ನಿರುದ್ಯೋಗ ಸಮಸ್ಯೆಯ ಕುರಿತೂ ಅವರು ಮಾತನಾಡಿದರು. ಉಪ್ಪಿನಂಗಡಿ ಸರಕಾರಿ ಪ.ಪೂ.ಕಾಲೇಜಿನ ಕಾರ್ಯಾಧ್ಯಕ್ಷರಾದ ಅಜೀಜ್ ಬಸ್ತಿಕ್ಕಾರ್‌ರವರು ಮಾತನಾಡಿ, ಶಿಬಿರವನ್ನು ವಿದ್ಯಾರ್ಥಿಗಳು ಧನಾತ್ಮಕವಾಗಿ ತೆಗೆದುಕೊಂಡು ಮುಂದೆ ಸಾಗಬೇಕು ಎಂದರು. ನ್ಯಾಯವಾದಿ ಮಹಮ್ಮದ್ ಕಬೀರ್ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಿ ಪುಸ್ತಕವನ್ನು ಪ್ರೀತಿಸಬೇಕು ಎಂದು ಹೇಳಿದರು. ಕೆಮ್ಮಾರ ಸರಕಾರಿ ಉ.ಹಿ.ಪ್ರಾ.ಶಾಲಾ ಮುಖ್ಯಶಿಕ್ಷಕಿ ಜಯಶ್ರೀಯವರು ಮಾತನಾಡಿ, ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದರು.
ಹಿರೆಬಂಡಾಡಿ ಗ್ರಾ.ಪಂ.ಸದಸ್ಯೆ ಉಷಾ ಹೆಚ್.ಎನ್., ಉಪ್ಪಿನಂಗಡಿ ಸರಕಾರಿ ಪ.ಪೂ.ಕಾಲೇಜು ಪ್ರಾಂಶುಪಾಲ ಸುಧೀರ್‌ಕುಮಾರ್ ಎಂ., ಪುತ್ತೂರು ಗ್ರಾಮಾಂತರ ವೃತ್ತ ವೃತ್ತ ನಿರೀಕ್ಷಕ ರವಿ ಬಿ.ಎಸ್., ಕೆಮ್ಮಾರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಸಂಜೀವ ಬಡ್ಡಮೆ, ಕೆಮ್ಮಾರ ಜುಮ್ಮಾ ಮಸೀದಿ ಅಧ್ಯಕ್ಷ ರಶೀದ್ ಹಾಜಿ ಬಡ್ಡಮೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೆಮ್ಮಾರ ಸರಕಾರಿ ಉ.ಹಿ.ಪ್ರಾ.ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಅಝೀಝ್ ಬಿ.ಕೆ.ಅವರು ಅತಿಥಿಗಳಿಗೆ ಹೂ ನೀಡಿ ಗೌರವಿಸಿದರು. ಉಪ್ಪಿನಂಗಡಿ ಸರಕಾರಿ ಪ.ಪೂ.ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ರಮೇಶ್ ಎಚ್.ಜಿ.,ಅವರು ಶಿಬಿರದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪ್ಪಿನಂಗಡಿ ಸರಕಾರಿ ಪ.ಪೂ.ಕಾಲೇಜು ಪ್ರಾಂಶುಪಾಲ ಸುಧೀರ್‌ಕುಮಾರ್ ಎಂ.ಸ್ವಾಗತಿಸಿದರು. ಉಪ್ಪಿನಂಗಡಿ ಸರಕಾರಿ ಪ.ಪೂ.ಕಾಲೇಜು ಕನ್ನಡ ಉಪನ್ಯಾಸಕ ಇಬ್ರಾಹಿಂ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ನವ್ಯಶ್ರೀ ನಿರೂಪಿಸಿದರು. ಕನ್ನಡ ಉಪನ್ಯಾಸಕಿ ಜ್ಯೋತಿ ಕೆ. ಹಾಗೂ ವಿದ್ಯಾರ್ಥಿಗಳು ಪ್ರಾರ್ಥಿಸಿದರು.