ಪೆರ್ನೆ: ನಾಪತ್ತೆಯಾಗಿದ್ದ ದೇವರ ಸರ ಪತ್ತೆ- ಅಡವಿಟ್ಟು ಹಣ ಪಡೆದಿದ್ದ ಆರೋಪ-ಮಾಜಿ ಅಧ್ಯಕ್ಷ ಪೊಲೀಸ್ ವಶಕ್ಕೆ

0

ಉಪ್ಪಿನಂಗಡಿ: ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದ ಬ್ರಹ್ಮಕಲಶೋತ್ಸದ ವೇಳೆ ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರಿಗೆ ಸಮರ್ಪಿಸಲಾದ ಆಭರಣಗಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ಸಲ್ಲಿಸಿದ ಬೆನ್ನಿಗೆಯೇ ದೇವಳದ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ ನಾಪತ್ತೆಯಾದ ಚಿನ್ನಾಭರಣದೊಂದಿಗೆ ಪೊಲೀಸರಿಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಕಳೆದ ಡಿಸೆಂಬರ್‌ನಲ್ಲಿ ಈ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಈ ಸಮಯದಲ್ಲಿ ದೇವರಿಗೆ ಭಕ್ತಾದಿಯೋರ್ವರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋ ಮಾಲೆಯನ್ನು ಸಮರ್ಪಿಸಿದ್ದರು. ಈ ಮಾಲೆ ಹಾಗೂ ಈ ಹಿಂದೆ ರಾಮದಾಸ್ ರೈ ಎಂಬವರು ಸಮರ್ಪಿಸಿದ ಎರಡು ಪವನಿನ ಚಿನ್ನದ ಸರ ದೇವಾಲಯದಲ್ಲಿದ್ದು ಆದಿತ್ಯವಾರದಂದು ಆಡಳಿತಾಧಿಕಾರಿಯ ಸಮ್ಮುಖದಲ್ಲಿ ನಡೆದ ಪರಿಶೀಲನೆಯ ವೇಳೆ ಆಭರಣಗಳು ನಾಪತ್ತೆಯಾಗಿರುವ ವಿಚಾರವು ಬೆಳಕಿಗೆ ಬಂದಿತ್ತು. ಈ ಬಗ್ಗೆ ದೇವಾಲಯದ ಆಡಳಿತ ಮಂಡಳಿಯ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ ಎನ್. ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.

ಆಭರಣ ನಾಪತ್ತೆ ಪ್ರಕರಣಕ್ಕೆ ಸಂಬAಧಿಸಿ ಶಂಕಿತರ ವಿರುದ್ಧ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು. ಈ ಮಧ್ಯೆ ದೇವಳದ ಮಾಜಿ ಅಧ್ಯಕ್ಷ ರೋಹಿತಾಕ್ಷ ಬಾಣಬೆಟ್ಟುರವರು ಚಿನ್ನಾಭರಣದೊಂದಿಗೆ ಮಂಗಳವಾರ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಅವರು ಚಿನ್ನಾಭರಣವನ್ನು ಉಪ್ಪಿನಂಗಡಿಯ ಖಾಸಗಿ ಹಣಕಾಸು ಸಂಸ್ಥೆಯೊAದರಲ್ಲಿ ಅಡಮಾನ ಇರಿಸಿ ಹಣ ಪಡೆದಿದ್ದು ಅಲ್ಲಿಂದ ಆಭರಣವನ್ನು ಬಿಡಿಸಿಕೊಂಡು ನೇರವಾಗಿ ಠಾಣೆಗೆ ಬಂದಿದ್ದರು. ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಅವರನ್ನು ವಶಕ್ಕೆ ಪಡೆದುಕೊಂಡು ದೇವಾಲಯದಲ್ಲಿ ಮಹಜರು ನಡೆಸಿ ಇಲಾಖಾ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಮಧ್ಯೆ ದೇವಾಲಯದಲ್ಲಿ ಇತ್ತೆನ್ನಲಾದ ಈ ಹಿಂದಿನ ದೇವಾಲಯದ ಪುನರ್ ನಿರ್ಮಾತೃ ದಿ. ರಾಮದಾಸ್ ರೈ ಎಂಬವರು ನೀಡಿದ್ದ 2 ಪವನ್ ತೂಕದ ಚಿನ್ನದ ಸರ ಇನ್ನೂ ನಾಪತ್ತೆಯಾಗಿದ್ದು, ಅದರ ಬಗ್ಗೆಯೂ ತನಿಖೆ ಮುಂದುವರೆದಿದೆ.

LEAVE A REPLY

Please enter your comment!
Please enter your name here