ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಗೆ ವಿನಯ ಕುಮಾರ್ ಸೊರಕೆ ಹೆಸರು ಚರ್ಚೆಯಲ್ಲಿ

0

ಬಿ.ಕೆ.ಹರಿಪ್ರಸಾದ್‌ಗೆ ಕೌಂಟರ್?

ರಾಜ್ಯಸಭಾ ಸದಸ್ಯರಾಗಿದ್ದು ಪ್ರಸ್ತುತ ವಿಧಾನ ಪರಿಷತ್ ಸದಸ್ಯರಾಗಿರುವ ಕರಾವಳಿ ಮೂಲದ ಬಿ.ಕೆ.ಹರಿಪ್ರಸಾದ್ ಅವರು, ರಾಜ್ಯ ಸಚಿವ ಸಂಪುಟ ರಚನೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಗ್ಗೆ ಬಹಿರಂಗ ಅಸಮಾಧಾನ ಹೊರ ಹಾಕಿದ್ದರು.ಈ ವಿಚಾರದಲ್ಲಿ ಪಕ್ಷದೊಳಗೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದು ಈ ನಿಟ್ಟಿನಲ್ಲಿ ಬಿ.ಕೆ.ಹರಿಪ್ರಸಾದ್ ಅವರಿಗೆ ಪರ್ಯಾಯವಾಗಿ ವಿನಯ ಕುಮಾರ್ ಸೊರಕೆ ಅವರಿಗೆ ಮಣೆ ಹಾಕಲು ತೀರ್ಮಾನಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಗೆ ನೇಮಕ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.ಆದರೆ, ಹಿಂದುಳಿದ ವರ್ಗಕ್ಕೆ ಪ್ರಾತಿನಿಧ್ಯ ನೀಡಬೇಕೆಂಬ ಕಾರಣಕ್ಕೆ ವಿನಯ್‌ಕುಮಾರ್ ಸೊರಕೆ ಹೆಸರು ಕಾರ್ಯಾಧ್ಯಕ್ಷ ಸ್ಥಾನಕ್ಕೆ ಪರಿಗಣನೆಯಲ್ಲಿದೆ ಎಂದು ಮೂಲಗಳು ಹೇಳಿವೆ.

ಬೆಂಗಳೂರು:ಮುAಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಮುಂದಾಗಿರುವ ಕಾಂಗ್ರೆಸ್ ವರಿಷ್ಠರು ನೂತನ ಕಾರ್ಯಾಧ್ಯಕ್ಷರುಗಳ ಸಹಿತ ಕೆಪಿಸಿಸಿಗೆ ಹೊಸದಾಗಿ ಪದಾಧಿಕಾರಿಗಳನ್ನು ನೇಮಕ ಮಾಡಲು ನಿರ್ಧರಿಸಿದ್ದು ಕಾರ್ಯಾಧ್ಯಕ್ಷ ಹುದ್ದೆಗೆ ಮಾಜಿ ಸಚಿವ, ಪುತ್ತೂರಿನ ಮಾಜಿ ಶಾಸಕರೂ ಆಗಿರುವ ಮಾಜಿ ಸಂಸದ ವಿನಯ ಕುಮಾರ್ ಸೊರಕೆ ಅವರ ಹೆಸರೂ ಪ್ರಬಲವಾಗಿ ಕೇಳಿ ಬರುತ್ತಿದ್ದು ಚರ್ಚೆಯಲ್ಲಿದೆ.
ಪ್ರಸ್ತುತ ಕರ್ನಾಟಕ ಸರಕಾರದಲ್ಲಿ ಸಚಿವರಾಗಿರುವ ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿ ಹೊಳಿ ಮತ್ತು ಈಶ್ವರ ಖಂಡ್ರೆ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದಿಂದ ಕೈಬಿಟ್ಟು ಈ ಸ್ಥಾನಗಳಿಗೆ ನೇಮಕ ಮಾಡುವ ಮೂಲಕ ಪ್ರಾತಿನಿಧ್ಯ ನೀಡಿ ವಿವಿಧ ಸಮುದಾಯಗಳ ಒಲವು ಗಳಿಸುವ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ಚಿಂತನೆ ನಡೆಸಿದ್ದು ಪ್ರಬಲ ಸಮುದಾಯಗಳಲ್ಲಿ ಒಂದಾಗಿರುವ ಬಿಲ್ಲವ ಸಮುದಾಯದಿಂದ ವಿನಯ ಕುಮಾರ್ ಸೊರಕೆ ಅವರ ಹೆಸರು ಚಾಲ್ತಿಯಲ್ಲಿದೆ.ಜೊತೆಗೆ ಪಂಚಮ ಪಕ್ಷದ ಸಾಲಿ ಸಮುದಾಯದಿಂದ ಶಾಸಕ ವಿನಯ ಕುಲಕರ್ಣಿ, ಒಕ್ಕಲಿಗ ಸಮುದಾಯದಿಂದ ರಾಜ್ಯ ಸಭೆ ಸದಸ್ಯ ಜಿ.ಸಿ.ಚಂದ್ರಶೇಖರ್ ಹಾಗೂ ಪರಿಶಿಷ್ಟ ಜಾತಿ ಸಮುದಾಯದಿಂದ ರಾಯಚೂರು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ವಸಂತ ಕುಮಾರ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಳಿಸುವ ಕುಳಿತು ಪಕ್ಷದ ವರಿಷ್ಠರು ಚಿಂತನೆ ನಡೆಸುತ್ತಿದ್ದಾರೆ.ಆ ಮೂಲಕ, ಜಾತಿ ಸಮೀಕರಣದಲ್ಲಿ ಸಮತೋಲನ ಸಾಧಿಸಿ ಲೋಕಸಭೆ ಚುನಾವಣೆಯಲ್ಲಿ ಮತ ಸೆಳೆಯುವ ತಂತ್ರಗಾರಿಕೆಯೂ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಪುತ್ತೂರು ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ, ಉಡುಪಿ ಕ್ಷೇತ್ರದ ಸಂಸದರಾಗಿ ಸೇವೆ ಸಲ್ಲಿಸಿದ್ದ ವಿನಯ ಕುಮಾರ್ ಸೊರಕೆ ಅವರು ಈ ಹಿಂದೆ ಕಾಪು ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾಗಿದ್ದ ಸಂದರ್ಭ ಸಿದ್ಧರಾಮಯ್ಯ ಅವರ ಸರಕಾರದಲ್ಲಿ ನಗರಾಭಿವೃದ್ಧಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಇವರು ಪರಾಭವಗೊಂಡಿದ್ದರು.ಆದರೆ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.ಈ ಹಿಂದೆ ಸಿಂಡಿಕೇಟ್ ಬ್ಯಾಂಕ್ ನಿರ್ದೇಶಕರಾಗಿಯೂ ಇವರು ಕಾರ್ಯನಿರ್ವಹಿಸಿದ್ದರು.
ಜಿಲ್ಲಾ ಘಟಕಗಳ ಅಧ್ಯಕ್ಷರ ಬದಲಾವಣೆ: ನೂತನ ಕಾರ್ಯಾಧ್ಯಕ್ಷರ ನೇಮಕದ ಜೊತೆಗೆ, ಕೆಪಿಸಿಸಿಗೆ ನೂತನ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳ ನೇಮಕವೂ ನಡೆಯಲಿದೆ.ಜೊತೆಗೆ ಕೆಲವು ಜಿಲ್ಲೆಗಳ ಅಧ್ಯಕ್ಷರನ್ನೂ ಬದಲಿಸುವ ಸಾಧ್ಯತೆ ಇದೆ.
ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟು ಕೆಪಿಸಿಸಿ ಪುನರ್‌ರಚನೆಗೆ ಉz್ದೆÃಶಿಸಲಾಗಿದೆ.ಹೊಸ ಪದಾಧಿಕಾರಿಗಳ ಪಟ್ಟಿಯಲ್ಲಿ ಎಲ್ಲ ಜಾತಿ, ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಲಿದೆ.ದಸರಾ ನಂತರ ನಿಗಮ ಮಂಡಳಿಗಳಿಗೂ ಅಧ್ಯಕ್ಷ- ಉಪಾಧ್ಯಕ್ಷರ ನೇಮಕದ ಜತೆಗೆ ಕೆಪಿಸಿಸಿಗೂ ನೂತನ ಪದಾಧಿಕಾರಿಗಳ ನೇಮಕ ನಡೆಯುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

LEAVE A REPLY

Please enter your comment!
Please enter your name here