ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ-ಕಡಬದ ಯುವಕ ಬೆಂಗಳೂರಿನಲ್ಲಿ ಬಂಧನ

0

ಕಡಬ: ಪುತ್ತೂರಿನ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಡಬದ ಯುವಕನೋರ್ವನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.


ಕಡಬ ಪಿಜಕ್ಕಳ ನಿವಾಸಿ ಯಜ್ಞೇಶ್ ಪೋಕ್ಸೊ ಕಾಯ್ದೆಯಡಿ ಬಂಧಿತನಾಗಿರುವ ಆರೋಪಿ. ಕೆಲ ತಿಂಗಳುಗಳ ಹಿಂದೆ ಈತ ಬಾಲಕಿಯನ್ನು ಮಡಿಕೇರಿಯ ಲಾಡ್ಜ್ ವೊಂದಕ್ಕೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾಗಿ ಆರೋಪಿಸಲಾಗಿದೆ.
ಇತ್ತೀಚೆಗೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸಗಳು ಕಾಣಿಸಿದ ಹಿನ್ನಲೆಯಲ್ಲಿ ಆಕೆ ಕಲಿಯುತ್ತಿದ್ದ ಶಾಲೆಯ ಶಿಕ್ಷಕಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿರುವುದಾಗಿ ತಿಳಿದು ಬಂದಿದೆ. ಆರೋಪಿಯು ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು, ಪ್ರಕರಣ ದಾಖಲಾಗುತ್ತಲೇ ಬೆಂಗಳೂರಿಗೆ ತೆರಳಿದ ಮಹಿಳಾ ಠಾಣೆ ಪೊಲೀಸರು ಅಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಮಡಿಕೇರಿಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ ಲಾಡ್ಜ್ ನಲ್ಲಿ ಸ್ಥಳ ಮಹಜರು ನಡೆಸಿದ್ದಾರೆ ಎಂದು ತಿಳಿದು ಬಂದಿದೆ

LEAVE A REPLY

Please enter your comment!
Please enter your name here