ಅನುಗ್ರಹ ಯೋಜನೆ: ಆಡು, ಕುರಿ ಸಾವಿಗೀಡಾದಲ್ಲಿ ಪರಿಹಾರಕ್ಕೆ ಅರ್ಜಿ ಆಹ್ವಾನ

0

ಪುತ್ತೂರು: 2023-24ನೇ ಸಾಲಿನ ಅನುಗ್ರಹ ಯೋಜನೆಯಡಿ ಆಕಸ್ಮಿಕವಾಗಿ ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಠ 5,000 ರೂ.ನಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ ಗರಿಷ್ಠ 10,000 ರೂ.ನಂತೆ ರಾಜ್ಯ ಸರಕಾರ ಪರಿಹಾರ ಘೋಷಿಸಿದೆ.

ಹಾಗಾಗಿ ಜಾನುವಾರು ಮಾಲಕರು ಈ ಯೋಜನೆಗೆ ಸಂಬಂಧಿಸಿದಂತೆ ಮೃತಪಟ್ಟ ಜಾನುವಾರುಗಳ ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳೀಯ ಪಶು ವೈದ್ಯರಿಂದ ದೃಢೀಕರಿಸಿ ಸೌಲಭ್ಯ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಪುತ್ತೂರು: 9448129708, ಕಡಬ: 9483922594 ಸಂಪರ್ಕಿಸಬಹುದು ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here