ಪುತ್ತೂರು: ದಸರಾ ಹಬ್ಬದ ಪ್ರಯುಕ್ತ ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಮತ್ತು ಹುಬ್ಬಳ್ಳಿಗೆ ವಿಶೇಷ ರೈಲು ಓಡಾಟ ನಡೆಸಲಿದೆ ಎಂದು ರೈಲ್ವೆ ಇಲಾಖೆಯು ತಿಳಿಸಿದೆ.
ಅ.20 ಶುಕ್ರವಾರ ಹಾಗೂ ಅ.23 ಸೋಮವಾರದಂದು ರೈಲು ಸಂಖ್ಯೆ 07303 ಹುಬ್ಬಳ್ಳಿ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ಪ್ರೆಸ್ ಹುಬ್ಬಳ್ಳಿಯಿಂದ ಮಧ್ಯಾಹ್ನ 3:30ಕ್ಕೆ ಹೊರಟು ರಾತ್ರಿ 11:25ಕ್ಕೆ ಯಶವಂತಪುರ ತಲುಪಲಿದೆ. ಅಲ್ಲಿಂದ ರಾತ್ರಿ 11:55ಕ್ಕೆ ಹೊರಟು ಮರುದಿನ ಅ.21 ಶನಿವಾರದಂದು ಬೆಳಗ್ಗೆ 9:40ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ಅದೇ ದಿನ ಅ.21 ಶನಿವಾರ ಹಾಗೂ ಅ.24 ಮಂಗಳವಾರದಂದು ರೈಲು ಸಂಖ್ಯೆ 07304 ಮಂಗಳೂರು ಜಂಕ್ಷನ್-ಹುಬ್ಬಳ್ಳಿ ವಿಶೇಷ ಎಕ್ಸ್ಪ್ರೆಸ್ ರೈಲು ಮಂಗಳೂರು ಜಂಕ್ಷನ್ನಿಂದ ಬೆಳಗ್ಗೆ 11:40ಕ್ಕೆ ಹೊರಟು ಅದೇ ದಿನ ರಾತ್ರಿ 9:20ಕ್ಕೆ ಯಶವಂತಪುರ ತಲುಪಲಿದೆ. ಅಲ್ಲಿಂದ ರಾತ್ರಿ 9:50ಕ್ಕೆ ಹೊರಡುವ ರೈಲು ಮರುದಿನ ಅ.22 ಆದಿತ್ಯವಾರ ಹಾಗೂ ಅ.25 ಬುಧವಾರದಂದು ಬೆಳಗ್ಗೆ 5:45ಕ್ಕೆ ಹುಬ್ಬಳ್ಳಿ ತಲುಪಲಿದೆ.
ಈ ರೈಲಿಗೆ ಮಂಗಳೂರು ಜಂಕ್ಷನ್,ಬಂಟ್ವಾಳ,ಕಬಕ ಪುತ್ತೂರು,ಸುಬ್ರಹ್ಮಣ್ಯ ರೋಡ್ ,ಸಕಲೇಶಪುರ ,ಹಾಸನ ಜಂಕ್ಷನ್,ಚನ್ನರಾಯಪಟ್ಟಣ, ಶ್ರವಣಬೆಳಗೊಳ, ಕುಣಿಗಲ್, ನೆಲಮಂಗಲ, ಯಶವಂತಪುರ, ತುಮಕೂರು, ಅರಸೀಕೆರೆ, ಬಿರೂರು, ದಾವಣಗೆರೆ, ಹರಿಹರ, ಹಾವೇರಿ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಾಗಿದೆ.
ಈ ರೈಲಿನಲ್ಲಿ ಜನರಲ್, ಸ್ಲೀಪರ್ ಕ್ಲಾಸ್, 3 ಟೈರ್ ಎಸಿ,2 ಟೈರ್ ಎಸಿ ಕೋಚುಗಳು ಇರಲಿದೆ ಎಂದು ರೈಲ್ವೇ ಇಲಾಖೆ ತಿಳಿಸಿದೆ.