ಅ.20: ಅಂಬಿಕಾ ವಿದ್ಯಾಲಯದಲ್ಲಿ ಶ್ರೀ ಶಾರದಾ ಪೂಜೆ, ಅಕ್ಷರಾಭ್ಯಾಸ

0

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಆವರಣದಲ್ಲಿರುವ ಶ್ರೀ ಶಂಕರ ಸಭಾಭವನದಲ್ಲಿ ಅ.20ರಂದು ಬೆಳಗ್ಗೆ 10.30ಕ್ಕೆ ಶ್ರೀ ಶಾರದಾ ಪೂಜೆ ಸಂಪನ್ನಗೊಳ್ಳಲಿದೆ. ಆ ಪ್ರ ಯುಕ್ತ ಎಳೆಯ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನಡೆಯಲಿದೆ. ಹೆತ್ತವರು ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲು ಬಯಸಿದಲ್ಲಿ 9071655688 ಅಥವಾ 08251 233488 ಸಂಖ್ಯೆಗೆ ಕರೆಮಾಡಿ ತಮ್ಮ ಆಗಮನವನ್ನು ಖಚಿತಪಡಿಸುವಂತೆ ಸೂಚಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವವರು ಭಾರತೀಯ ಉಡುಗೆ-ತೊಡುಗೆಗಳಲ್ಲಿ ಬರುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here