ಕಾವು ತುಡರ್ ಭಜನಾ ಸಂಘದ 8ನೇ ವಾರ್ಷಿಕೋತ್ಸವದ ಆಮಂತ್ರಣ ಬಿಡುಗಡೆ

0

ಕಾವು: ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕಾವು ನನ್ಯ ತುಡರ್ ಯುವಕ ಮಂಡಲದ ಅಧೀನದಲ್ಲಿರುವ ತುಡರ್ ಭಜನಾ ಸಂಘದ 8ನೇ ವಾರ್ಷಿಕೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಅ.19ರಂದು ಸಂಜೆ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಶಿವಪ್ರಸಾದ್ ಕಡಮಣ್ಣಾಯರವರು ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು. ಕಾವು ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಚಂದ್ರಶೇಖರ ರಾವ್ ನಿಧಿಮುಂಡರವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುಬ್ರಾಯ ಬಲ್ಯಾಯ, ಗೌರವಾಧ್ಯಕ್ಷ ಶೇಷಪ್ಪ ಗೌಡ ಪರನೀರು, ಅಧ್ಯಕ್ಷ ಜಗದೀಶ ನಾಯ್ಕ ಆಚಾರಿಮೂಲೆ, ಉಪಾಧ್ಯಕ್ಷ ಶ್ರೀಕುಮಾರ್ ಬಲ್ಯಾಯ, ಭಜನಾ ಸಂಘದ ಗೌರವಾಧ್ಯಕ್ಷ ರಾಮಣ್ಣ ನಾಯ್ಕ ಆಚಾರಿಮೂಲೆ, ಅಧ್ಯಕ್ಷ ಸಂಕಪ್ಪ ಪೂಜಾರಿ ಚಾಕೋಟೆ, ಕಾರ್ಯದರ್ಶಿ ಲಿಂಗಪ್ಪ ನಾಯ್ಕ ನನ್ಯ, ಯುವಕ ಮಂಡಲದ ಮಾಜಿ ಅಧ್ಯಕ್ಷ ಸುನೀಲ್ ನಿಧಿಮುಂಡ, ಸದಸ್ಯರಾದ ನಿರಂಜನ ರಾವ್ ಕಮಲಡ್ಕ, ಭವಿತ್ ರೈ, ಬಾಲಕೃಷ್ಣ ನಾಯ್ಕ ಕುಂಞಿಕುಮೇರು, ರಮೇಶ್ ಗೌಡ ಆಚಾರಿಮೂಲೆ, ಹರ್ಷಿತ್ ಎ.ಆರ್.ರವರು ಉಪಸ್ಥಿತರಿದ್ದರು.
ತುಡರ್ ಭಜನಾ ಸಂಘದ 8ನೇ ವರ್ಷದ ವಾರ್ಷಿಕೋತ್ಸವವು ಅ.29ರಂದು ಸಂಜೆ ಕಾವು ನನ್ಯ ಜನಮಂಗಲ ಸಭಾಭವನದಲ್ಲಿ ನಡೆಯಲಿದೆ. ಸಂಜೆ ಗಂಟೆ 5ರಿಂದ ಭಜನಾ ಕಾರ್ಯಕ್ರಮ ಆರಂಭಗೊಂಡು ಬಳಿಕ ತುಡರ್ ಸುಜ್ಞಾನ ಮಕ್ಕಳ ಭಜನಾ ಸಂಘದಿಂದ ಕುಣಿತ ಭಜನೆ ನಡೆಯಲಿದೆ. ಸಂಜೆ ಗಂಟೆ 7.30ರಿಂದ ಧಾರ್ಮಿಕ ಸಭೆ ನಡೆಯಲಿದ್ದು, ಯುವಕ ಮಂಡಲದ ಅಧ್ಯಕ್ಷ ಜಗದೀಶ ನಾಯ್ಕ ಆಚಾರಿಮೂಲೆ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಕ್ಷೇತ್ರ ಹನುಮಗಿರಿಯ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯರವರು ಶುಭಾಶಂಸನೆ ಮಾಡಲಿದ್ದು, ವಕೀಲ ಮಹೇಶ್ ಕಜೆಯವರು ಧಾರ್ಮಿಕ ಭಾಷಣ ಮಾಡಲಿದ್ದಾರೆ, ದಾಸ ಸಾಹಿತ್ಯ ಸಂಕೀರ್ತನಕಾರ ಹಾಗೂ ಪ್ರಚಾರಕರೂ ಆಗಿರುವ ರಾಮಕೃಷ್ಣ ಕಾಟುಕುಕ್ಕೆಯವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾವು ಅಮ್ಚಿನಡ್ಕ ವಿನಾಯಕ ಭಜನಾ ಮಂದಿರದ ಸಂಚಾಲಕ ಶೇಷಪ್ಪ ಗೌಡ ನೀರ್ಕಜೆಯವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ ಸಭೆಯ ಬಳಿಕ ಭೋಜನ ನಡೆಯಲಿದೆ.

LEAVE A REPLY

Please enter your comment!
Please enter your name here