ಕಾಣಿಯೂರು: ಗ್ರಾಮ ಪಂಚಾಯತ್ ಬೆಳಂದೂರು ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ನೋಂದಣಿ ಶಿಬಿರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಾರ್ವತಿ ಮರಕ್ಕಡರವರು ಕಾರ್ಯಕ್ರಮ ಉದ್ಘಾಟಿಸಿ ಸಾರ್ವಜನಿಕರು ಮೂರು ದಿನಗಳ ಕಾಲ ನಡೆಯುವ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅಂಚೆ ಇಲಾಖೆಯ ಸಿಬ್ಬಂದಿ ಶೃತಿ ಆಧಾರ್ ನೋಂದಣಿ ಮತ್ತು ತಿದ್ದುಪಡಿಗೆ ಬೇಕಾದ ದಾಖಲೆಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷರಾದ ಜಯಂತ ಅಬೀರ, ಸದಸ್ಯರಾದ ಉಮೇಶ್ವರಿ ಅಗಳಿ, ಲೋಹಿತಾಕ್ಷ ಕೆಡೆಂಜಿಕಟ್ಟ, ವಿಠಲ ಗೌಡ ಅಗಳಿ,ಗೀತಾ ಕುವೆತ್ತೋಡಿ, ತೇಜಾಕ್ಷಿ ಕೊಡಂಗೆ, ಹರಿಣಾಕ್ಷಿ ಬನಾರಿ, ಕುಸುಮಾ ಅಂಕಜಾಲು, ರವಿಕುಮಾರ್ ಕೆಡೆಂಜಿ, ಪ್ರವೀಣ್ ಕೆರೆನಾರು,ಕಾಯಿಮಣ ಅಂಚೆ ಇಲಾಖೆಯ ಸಿಬ್ಬಂದಿ ಸೀತಾರಾಮ ಬೆಳಂದೂರು ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿಗಳಾದ ಮಮತಾ, ಗೀತಾ, ಹರ್ಷಿತ್, ಸಂತೋಷ್ ವಿಮಲ,ಪ್ರಶಾಂತಿ ಸಹಕರಿಸಿದರು. ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣರವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಬೆಳಂದೂರು ಗ್ರಾ.ಪಂ.ನಲ್ಲಿ ಮೂರು ದಿನ ನಡೆದ ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮದಲ್ಲಿ ಹೊಸ ನೋಂದಣಿ, ಮೊಬೈಲ್ ನಂಬರ್ ಸೇರ್ಪಡೆ, ಬದಲಾವಣೆ, ಹೆಸರು ವಿಳಾಸ ತಿದ್ದುಪಡಿ, ಜನ್ಮದಿನಾಂಕ ತಿದ್ದುಪಡಿ, 18ವರ್ಷದ ಕೆಳಗಿನವರ ಹೊಸ ಆಧಾರ್ ನೋಂದಣಿ ಸೇವೆಗಳು ನಡೆಯಿತು. ಹಲವಾರು ಮಂದಿ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.