ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ, ಶಾರದೋತ್ಸವ ಅಂಗವಾಗಿ ಅ.20ರಂದು ಬೆಳಿಗ್ಗೆ ಶಾರದಾ ವಿಗ್ರಹ ಪ್ರತಿಷ್ಠೆ ನಡೆಯಿತು.
ಪುತ್ತೂರು ಉಳ್ಳಾಳ್ತಿ ಕಟ್ಟೆ ಸಮೀಪದ ಪ್ರಭು ಸ್ಟುಡಿಯೋರವರ ನಿವಾಸದಲ್ಲಿ ಶ್ರೀ ದೇವಿಯ ವಿಗ್ರಹಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಮುಖ್ಯರಸ್ತೆಯಿಂದಾಗಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಪ್ರದಕ್ಷಿಣೆ ಸಲ್ಲಿಸಿ ಭಜನಾ ಮಂದಿರದಲ್ಲಿ ಪ್ರತಿಷ್ಠೆ ಮಾಡಲಾಯಿತು.
ಮಂದಿರದ ಅರ್ಚಕ ಹರಿಪ್ರಸನ್ನ ಸರೋಳಿತ್ತಾಯ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಮಂದಿರದ ಅಧ್ಯಕ್ಷ ಸಾಯಿರಾಮ ರಾವ್, ಉತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಬನ್ನೂರು, ಶಾರದೋತ್ಸವ ಸಮಿತಿ ಸಂಚಾಲಕ ಸೀತಾರಾಮ ರೈ ಕೆದಂಬಾಡಿಗುತ್ತು, ಉತ್ಸವ ಸಮಿತಿ ಸಂಚಾಲಕ ಪಿ.ಜಿ. ಜಗನ್ನಿವಾಸ ರಾವ್, ಕಾರ್ಯಧ್ಯಕ್ಷ ಮುರಳೀಕೃಷ್ಣ ಹಸಂತ್ತಡ್ಕ, ಕಾರ್ಯದರ್ಶಿ ಅಜಿತ್ ರೈ ಹೊಸಮನೆ, ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿ ಜಯಂತ ಉರ್ಲಾಂಡಿ, ಜತೆ ಕಾರ್ಯದರ್ಶಿ ತಾರನಾಥ್ ಹೆಚ್., ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿತ್ಯಕರಸೇವಕರ ತಂಡದ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.