ಪುತ್ತೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ಅ.28 ಮತ್ತು 29ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರ ಹಾಗೂ ಬ್ರೋಷರ್ ಬಿಡುಗಡೆ ಕಾರ್ಯಕ್ರಮವು ಅ.21ರಂದು ಅಪರಾಹ್ನ 2.30ಕ್ಕೆ ಪುತ್ತೂರು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.
ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಹಾಗೂ ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಚಂದ್ರಹಾಸ್ ಶೆಟ್ಟಿ ರಂಗೋಲಿ ಮತ್ತು ಪದಾಧಿಕಾರಿಗಳು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕಿಯರಾದ ಶಕುಂತಳಾ ಟಿ.ಶೆಟ್ಟಿ, ಮಲ್ಲಿಕಾ ಪ್ರಸಾದ್, ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿರವರುಗಳು ಭಾಗವಹಿಸಲಿದ್ದು, ಈ ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಬಂಟರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಜಿಲ್ಲಾ ಪ್ರತಿನಿಧಿಗಳು, ವಿಶೇಷ ಮತ್ತು ಖಾಯಂ ಆಹ್ವಾನಿತರು ಹಾಗೂ ಯುವ, ಮಹಿಳಾ, ವಿದ್ಯಾರ್ಥಿ ಬಂಟರ ಸಂಘಗಳ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಭಾಗವಹಿಸಬೇಕೆಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿ ಹಾಗೂ ಕೋಶಾಧಿಕಾರಿ ಕೃಷ್ಣ ಪ್ರಸಾದ್ ಆಳ್ವ ಉಪ್ಪಳಿಗೆರವರು ತಿಳಿಸಿದ್ದಾರೆ.