ಕಾಣಿಯೂರು: ಚಿತ್ರದುರ್ಗದ ಹಿರೆಕೇರಿ ವಿದ್ಯಾಸಂಸ್ಥೆಯಲ್ಲಿ ಅ 20ರಂದು ನಡೆದ ರಾಜ್ಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಶ್ರೀಮಾ ಕೆ. ಎಚ್ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದು, ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಶ್ರೀಮಾ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಹುದೇರಿ ಕುಶಾಲಪ್ಪ ಗೌಡ ಹಾಗೂ ಸುಜಿತಾ ದಂಪತಿ ಪುತ್ರಿ.
ಇದೇ ಸಂಸ್ಥೆಯ ವಿದ್ಯಾರ್ಥಿನಿ ಸಾನ್ವಿಕ ಎಚ್ ತೃತೀಯ ಸ್ಥಾನ ಪಡೆದಿದ್ದಾರೆ. ಇವರು ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಶೇರ ಯಾದವ ಎಚ್ ಮತ್ತು ಶಿಕ್ಷಕಿ ವೀಣಲತಾ ದಂಪತಿಗಳ ಪುತ್ರಿ. ಇವರಿಗೆ ಸಂಸ್ಥೆಯ ಯೋಗ ಶಿಕ್ಷಕಿ ಶಶಿಕಲಾರವರು ತರಬೇತಿ ನೀಡಿರುತ್ತಾರೆ. ಇವರನ್ನು ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಕೆ ಎಂ ಬಿ, ಶಾಲಾ ಡಳಿತಾಧಿಕಾರಿ ವಸಂತ ರೈ ಕಾರ್ಕಳ, ಮುಖ್ಯಗುರು ಸರಸ್ವತಿ ಎಂ ಮತ್ತು ಎಲ್ಲಾ ಶಿಕ್ಷಕ ವೃಂದದವರು ಅಭಿನಂದಿಸಿದರು.