ಕಾಣಿಯೂರು ಪ್ರಗತಿಯ ಮೋನಿಶ್ ತಂಟೆಪ್ಪಾಡಿ ಯೋಗಾಸನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಕಾಣಿಯೂರು: ಚಿತ್ರದುರ್ಗದ ಹಿರೆಕೇರಿ ವಿದ್ಯಾಸಂಸ್ಥೆಯಲ್ಲಿ ಅ 20ರಂದು ನಡೆದ ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿ ಮೋನಿಶ್ ತಂಟೆಪ್ಪಾಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಮದ್ಯ ಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.


ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯಾಗಿರುವ ಇವರು ಸುಳ್ಯ ತಾಲೂಕಿನ ಕಳಂಜ ಗ್ರಾಮದ ವಿಶ್ವನಾಥ ಮತ್ತು ದಯಾಮಣಿ ದಂಪತಿಗಳ ಪುತ್ರ.ಇವರಿಗೆ ಸಂಸ್ಥೆಯ ಯೋಗ ಶಿಕ್ಷಕಿ ಶಶಿಕಲಾರವರು ತರಬೇತಿ ನೀಡಿರುತ್ತಾರೆ. ಇವರನ್ನು ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಕೆ ಎಂ ಬಿ, ಶಾಲಾ ಡಳಿತಾಧಿಕಾರಿ ವಸಂತ ರೈ ಕಾರ್ಕಳ, ಮುಖ್ಯಗುರು ಸರಸ್ವತಿ ಎಂ ಮತ್ತು ಎಲ್ಲಾ ಶಿಕ್ಷಕವೃಂದದವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here