ಪುತ್ತೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಸೋಮವಾರ ಪುತ್ತೂರಿನ ನೃತ್ಯೋಪಾಸನಾ ಕಲಾ ಕೇಂದ್ರ ಇದರ ವಿದ್ಯಾರ್ಥಿಗಳಿಂದ ವಿಶೇಷ ನೃತ್ಯರೂಪಕ ಪ್ರದರ್ಶನಗೊಂಡಿತು.
ಮೈಸೂರು ದಸರಾ ಮಹೋತ್ಸವದ ಗಾನಭಾರತಿ ಸಾಂಸ್ಕೃತಿಕ ವೇದಿಕೆಯಲ್ಲಿ ಈ ಕಲಾ ಕೇಂದ್ರದ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ನಿರ್ದೇಶನದಲ್ಲಿ ವಿದ್ಯಾರ್ಥಿಗಳು ವಿಶೇಷ ನೃತ್ಯ ರೂಪಕ ಪ್ರಸ್ತುತಪಡಿಸಿದರು. ಮಂಡ್ಯ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ಚೆಲುವಯ್ಯ, ಮಾಜಿ ಸಹಾಯಕ ನಿರ್ದೇಶಕ ನಾಗರಾಜ್ ಇವರು ಕಲಾವಿದರನ್ನು ಗೌರವಿಸಿದರು.
ಮೈಸೂರು ದಸರಾ ಮಹೋತ್ಸವದಲ್ಲಿ ಈ ಕಲಾ ಕೇಂದ್ರಕ್ಕೆ ಈ ಬಾರಿ ದೊರೆತ ಎರಡನೇ ಕಾರ್ಯಕ್ರಮ ಇದಾಗಿದೆ.