![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ.23ರಂದು ಸಾಮೂಹಿಕ ಆಯುಧ ಪೂಜೆ ನಡೆಯಿತು.
ಬೆಳಿಗ್ಗೆ ಬ್ರಹ್ಮರಥ, ಸಣ್ಣ ರಥಕ್ಕೆ ಆಯುಧ ಪೂಜೆಯ ಬಳಿಕ ಸಾಮೂಹಿಕ ಆಯುಧ ಪೂಜೆ ನಡೆಯಿತು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಪೂಜಾ ಕಾರ್ಯಕ್ರಮ ನೆರವೇರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ಶೇಖರ್ನಾರಾವಿ, ರಾಮದಾಸ್ ಗೌಡ, ಬಿ.ಐತ್ತಪ್ಪ ನಾಯ್ಕ್, ರಾಮಚಂದ್ರ ಕಾಮತ್, ರವೀಂದ್ರನಾಥ ರೈ ಬಳ್ಳಮಜಲು, ವೀಣಾ ಬಿ.ಕೆ, ಡಾ.ಸುಧಾ ಎಸ್ ರಾವ್, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ವಾಸ್ತು ಇಂಜಿನಿಯರ್ ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಸಹಿತ ಹಲವಾರು ಮಂದಿ ಈ ಸಂದರ್ಭ ಉಪಸ್ಥಿತರಿದ್ದರು.
![](https://puttur.suddinews.com/wp-content/uploads/2023/10/IMG-20231024-WA0116.jpg)