ಜಿಲ್ಲಾ ಮಟ್ಟದ ಕಬಡ್ಡಿ-ರಾಮಕುಂಜ ಕನ್ನಡ ಮಾಧ್ಯಮ ಪ್ರೌಢಶಾಲೆ ಪ್ರಥಮ

0

ರಾಮಕುಂಜ: ವಿಟ್ಲದ ಅಳಕೆಮಜಲುನಲ್ಲಿ ನಡೆದ ದ.ಕ.ಜಿಲ್ಲಾ ಮಟ್ಟದ ಪ್ರೌಢ ಶಾಲಾ ಬಾಲಕರ ಆಹ್ವಾನಿತ 24 ತಂಡಗಳ ಕಬಡ್ಡಿ ಪಂದ್ಯಾಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.

  • ತಂಡದ ಆಟಗಾರ ಕಾರ್ತಿಕ್ ಅಲ್ ರೌಂಡರ್ ಪ್ರಶಸ್ತಿ ಹಾಗೂ ಸತ್ಯ ಅವರು ಬೆಸ್ಟ್ ಕ್ಯಾಚರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ತಂಡಕ್ಕೆ ಮಾಧವ ಬಿ.ಕೆ, ಜಸ್ವಂತ್ ಹಾಗೂ ಮಂಜುನಾಥ್‌ರವರು ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಶಾಲಾ ಮುಖ್ಯಗುರು ಸತೀಶ್ ಭಟ್, ಶಾಲಾ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯವರು ಸಹಕರಿಸಿದ್ದರು.

LEAVE A REPLY

Please enter your comment!
Please enter your name here