ಇಂದು (ಅ.25) ಪುತ್ತೂರು ದಸರಾ ಮಹೋತ್ಸವದ ಸಮಾರೋಪ

0

ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿಯಿಂದ ಅ.15ರಿಂದ ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ, ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ನಡೆಯುತ್ತಿರುವ 21ನೇ ವರ್ಷದ ಪುತ್ತೂರು ದಸರಾ ಮಹೋತ್ಸವದ ಸಮಾರೋಪ ಸಮಾರಂಭ ಅ.25ರಂದು ನಡೆಯಲಿದೆ.
ಸಮಾರೋಪ ಸಮಾರಂಭದಲ್ಲಿ ಸಂಜೆ ಗಂಟೆ 6ಕ್ಕೆ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು. ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಹೇಮನಾಥ ಶೆಟ್ಟಿ ಕಾವು ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಜಿಲ್ಲಾ ಉತ್ತಮ ಶಿಕ್ಷಕ ಪುರಸ್ಕೃತ ಉದಯ ಕುಮಾರ್ ರೈ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here