ಅ.28 : ಚಂದ್ರಗ್ರಹಣ ಹಿನ್ನಲೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

0

ಸುಬ್ರಹ್ಮಣ್ಯ : ಅ.28ರಂದು ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯ ಬದಲಾವಣೆ ಮಾಡಲಾಗಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ದೇವಸ್ಥಾನದ ಪ್ರಧಾನ ಅರ್ಚಕರ ನಿರ್ದೇಶನದಂತೆ ಚಂದ್ರಗ್ರಹಣದಂದು ಭಕ್ತಾದಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆಯಾಗಲಿದ್ದು ಶ್ರೀ ದೇವರ ದರ್ಶನ ಹಾಗೂ ಸೇವಾ ಸಮಯವನ್ನು ಬದಲಾಯಿಸಲಾಗಿದೆ. ಅ.28ರ ರಾತ್ರಿ ಮಹಾಪೂಜೆಯು ಸಾಯಂಕಾಲ ಗಂಟೆ 6.30 ಮುಕ್ತಾಯವಾಗಲಿದ್ದು, ಸಾಯಂಕಾಲ ಆಶ್ಲೇಷ ಬಲಿ ಸೇವೆ ಇರುವುದಿಲ್ಲ 6.30 ರ ನಂತರ ಶ್ರೀ ದೇವರ ದರ್ಶನ ಇರುವುದಿಲ್ಲ ಹಾಗೂ ರಾತ್ರಿ ಪ್ರಸಾದ ಭೋಜನ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here