ಅ.27:ಫಿಲೋಮಿನಾದಲ್ಲಿ ತಾಲೂಕು ಪ.ಪೂ ವಿಭಾಗದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

0

ಪುತ್ತೂರು:ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಪುತ್ತೂರು ತಾಲೂಕು ಪದವಿ ಪೂರ್ವ ವಿಭಾಗದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ ಅ.27 ರಂದು ಫಿಲೋಮಿನಾ ಕಾಲೇಜಿನ ಕ್ರೀಡಾಂಗದಲ್ಲಿ ಜರಗಲಿದೆ.


ಬೆಳಗ್ಗಿನ ಉದ್ಘಾಟನಾ ಪಂದ್ಯಾಟದಲ್ಲಿ ಮಾಯಿದೆ ದೇವುಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ|ಲಾರೆನ್ಸ್ ಮಸ್ಕರೇನ್ಹಸ್ ರವರು ಅಧ್ಯಕ್ಷತೆ ವಹಿಸಲಿರುವರು. ಅತಿಥಿಗಳಾಗಿ ಫಿಲೋಮಿನಾ ಕಾಲೇಜು ಕ್ಯಾಂಪಸ್ ನಿರ್ದೇಶಕ ವಂ|ಸ್ಟ್ಯಾನಿ ಪಿಂಟೋ, ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ|ಅಶೋಕ್ ರಾಯನ್ ಕ್ರಾಸ್ತಾರವರು ಉಪಸ್ಥಿತಲಿರುವರು. ಸಂಜೆ ನಡೆಯುವ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಬ್ರೈಟ್ ವೇ ಇಂಡಿಯಾ ಮಂಗಳೂರು ಇದರ ಆಡಳಿತ ನಿರ್ದೇಶಕ ಹರ್ಷಕುಮಾರ್ ರೈ ಮಾಡಾವುರವರು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಎಲ್ಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾಗವಹಿಸುವ ತಂಡಗಳು…
ಬಾಲಕರ ವಿಭಾಗ..
1)ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು 2)ವಿವೇಕಾನಂದ ಪದವಿ ಪೂರ್ವ ಕಾಲೇಜು, 3)ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು, 4)ಕೆಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜು,
5)ಬೆಟ್ಟಂಪಾಡಿ ಸರಕಾರಿ ಪದವಿ ಪೂರ್ವ ಕಾಲೇಜು, 6)ಬೆಳಿಯೂರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು, 7)ನರೇಂದ್ರ ಪದವಿ ಪೂರ್ವ ಕಾಲೇಜು
8)ಅಂಬಿಕಾ ಪದವಿ ಪೂರ್ವ ಕಾಲೇಜು
9)ಜ್ಯೂನಿಯರ್ ಕಾಲೇಜು ಕೊಂಬೆಟ್ಟು

ಬಾಲಕಿಯರ ವಿಭಾಗ…
1)ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು
2)ವಿವೇಕಾನಂದ ಪದವಿ ಪೂರ್ವ ಕಾಲೇಜು
3))ಜ್ಯೂನಿಯರ್ ಕಾಲೇಜು ಕೊಂಬೆಟ್ಟು
4)ಅಂಬಿಕಾ ಪದವಿ ಪೂರ್ವ ಕಾಲೇಜು
5)ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು

LEAVE A REPLY

Please enter your comment!
Please enter your name here