ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್ ಜಯಂತಿ ಕರ್ತವ್ಯಕ್ಕೆ ಹಾಜರು

0

ಪುತ್ತೂರು: ಪುತ್ತೂರಿನ ೫ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಸರಕಾರಿ ಅಭಿಯೋಜಕರಾಗಿ ಜಯಂತಿ ಕೆ.ರವರು ಅ.26ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಕುಂದಾಪುರ ನಿವಾಸಿಯಾಗಿರುವ ಜಯಂತಿ ಕೆ.ರವರು ಉಡುಪಿಯ ಪ್ರಿನ್ಸಿಪಲ್ ಮತ್ತು ಸಿಜೆಎಎಂ ನ್ಯಾಯಾಲಯದಲ್ಲಿ ಸೀನಿಯರ್ ಸಹಾಯಕ ಸರಕಾರಿ ಅಭಿಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆ ಮೊದಲು ಉಡುಪಿಯ ಮೂರನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಹಾಯಕ ಸರಕಾರಿ ಅಭಿಯೋಜಕರಾಗಿ ಮತ್ತು ಹೊನ್ನಾವರ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಹಾಯಕ ಸರಕಾರಿ ಅಭಿಯೋಜಕರಾಗಿ ಕಾರ್ಯ ನಿರ್ವಹಿಸಿದ್ದರು. ಕುಂದಾಪುರ ಭಂಡಾರ್ಕರ್ ಕಾಲೇಜಿನಲ್ಲಿ ಬಿ.ಕಾಂ ಪದವಿ ಪಡೆದಿದ್ದ ಜಯಂತಿ ಅವರು ಕುಂದಾಪುರ ವೈ.ಎಂ.ಎಸ್. ಕಾನೂನು ಕಾಲೇಜ್‌ನಲ್ಲಿ ಎಲ್‌ಎಲ್‌ಬಿ ಪದವಿ ಗಳಿಸಿದ್ದರು. ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಸರಕಾರಿ ಅಭಿಯೋಜಕರಾಗಿ ಪ್ರಭಾರ ಕರ್ತವ್ಯದಲ್ಲಿದ್ದ ಪ್ರಕಾಶ್ಚಂದ್ರ ಶೆಟ್ಟಿಯವರು ಮತ್ತೆ ಉಡುಪಿ ನ್ಯಾಯಾಲಯಕ್ಕೆ ತೆರಳಿದ್ದರಿಂದ ಜಯಂತಿಯವರು ಪುತ್ತೂರುಗೆ ಸರಕಾರಿ ಅಭಿಯೋಜಕರಾಗಿ ಆಗಮಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪುತ್ತೂರು ನ್ಯಾಯಾಲಯದ ಕಚೇರಿಯಲ್ಲಿ ನೂತನ ಪಬ್ಲಿಕ್ ಪ್ರಾಸಿಕ್ಯೂಟರ್ ಜಯಂತಿ ಕೆ. ಅವರು ಪುತ್ತೂರು ಡಿವೈಎಸ್‌ಪಿ ಡಾ. ಗಾನಾ ಪಿ. ಕುಮಾರ್ ಅವರು ಸ್ವಾಗತಿಸಿದರು.

LEAVE A REPLY

Please enter your comment!
Please enter your name here