ನರಿಮೊಗರು: ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಶಾರದಾ ಪೂಜೆ

0

ನರಿಮೊಗರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಪುಸ್ತಕಗಳನ್ನು ಇಟ್ಟು ವಿದ್ಯಾ ಸರಸ್ವತಿ ಮಾತೆಗೆ ಪೂಜೆಯನ್ನು ನೆರವೇರಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ ಪೂಜಾ ವಿಧಾನವನ್ನು ನೆರವೇರಿಸಿ ಮಾತನಾಡಿ, ಪುಸ್ತಕವನ್ನು ಪೂಜಿಸುವುದು ಮಾತ್ರವಲ್ಲ ಅದರಲ್ಲಿರುವ ಜ್ಞಾನವನ್ನು ಪಡೆದು ಉತ್ತಮ ವಿದ್ಯಾರ್ಥಿಗಳಾಗಬೇಕೆಂದು ಆಶೀರ್ವದಿಸಿದರು. ನಂತರ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆದು ಪ್ರಸಾದ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯಶಿಕ್ಷಕಿ ಜಯಮಾಲಾ ವಿ ಎನ್, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here