ಕುಂತೂರು ಮಾರ್ ಇವಾನಿಯೋಸ್ ಬಿ.ಇಡಿ. ಕಾಲೇಜಿಗೆ ಸೆಮಿಸ್ಟರ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

0

ಕಡಬ: ಮಂಗಳೂರು ವಿಶ್ವ ವಿದ್ಯಾನಿಲಯದ ಬಿ.ಇಡಿ. ವಿಭಾಗದಲ್ಲಿ 2023ರ ಅಗಸ್ಟ್‌ನಲ್ಲಿ ನಡೆದ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಕುಂತೂರು ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಿಂದ ಪರೀಕ್ಷೆಗೆ ಹಾಜರಾದ ಎಲ್ಲಾ ಪ್ರಶಿಕ್ಷಣಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತಿರ್ಣರಾಗಿ ಎರಡು ಸೆಮಿಸ್ಟರ್‌ನಲ್ಲೂ ಶೇ. 100 ಫಲಿತಾಂಶ ಲಭಿಸಿದೆ.


ಪ್ರಥಮ ಸೆಮಿಸ್ಟರ್‌ನಲ್ಲಿ ಪರೀಕ್ಷೆಗೆ ಹಾಜರಾದ 50 ಪ್ರಶಿಕ್ಷಣಾರ್ಥಿಗಳಲ್ಲಿ 46 ಪ್ರಶಿಕ್ಷಣಾರ್ಥಿಗಳು ಅತಿ ವಿಶಿಷ್ಟ ಶ್ರೇಣಿಯಲ್ಲಿ ಮತ್ತು 4 ಪ್ರಶಿಕ್ಷಣಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಪ್ರಿಯಾ ಎಮ್ 88.67% ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು, ವಿದ್ಯಾ ಕೆ 86.50% ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಕೀರ್ತಿ ಮತ್ತು ತೇಜಸ್ವಿನಿ ತಲಾ 86.೦೦% ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ತೃತೀಯ ಸೆಮಿಸ್ಟರ್‌ನಲ್ಲಿ ಪರೀಕ್ಷೆಗೆ ಹಾಜರಾದ 24 ಪ್ರಶಿಕ್ಷಣಾರ್ಥಿಗಳಲ್ಲಿ 21 ಪ್ರಶಿಕ್ಷಣಾರ್ಥಿಗಳು ಅತಿ ವಿಶಿಷ್ಟ ಶ್ರೇಣಿಯಲ್ಲಿ ಮತ್ತು 3 ಪ್ರಶಿಕ್ಷಣಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಫಾತಿಮತ್ ತಸ್ಪಿಯತ್ 85.83% ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು, ಶ್ವೇತಾ ಪಿ.ಕೆ. ಮತ್ತು ರಶ್ಮಿ ಪಿ.ಕೆ. ತಲಾ 84.33% ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು ಮತ್ತು ಸಂಧ್ಯಾ ಎಸ್. ಎ. 83.33% ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

LEAVE A REPLY

Please enter your comment!
Please enter your name here