ದ.ಕ. ಜಿಲ್ಲೆ ತೆಂಗು ರೈತ ಉತ್ಪಾದಕ ಸಂಸ್ಥೆಯಿಂದ ಸೋಶಿಯಲ್ ಮೀಡಿಯಾ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಸೋಶಿಯಲ್ ಮೀಡಿಯಾ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು 250 ಹುದ್ದೆಗಳು ಖಾಲಿಯಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನ್ನಡ, ಇಂಗ್ಲೀಷ್ ಅಥವಾ ಹಿಂದಿ ಈ ಮೂರು ಭಾಷೆಗಳಲ್ಲಿ ಯಾವುದಾದರು ಒಂದರಲ್ಲಿ ಭಾಷಾ ಪರಿಣಿತಿ ಹೊಂದಿರಬೇಕು. 15 ರಿಂದ 20 ಸಾವಿರ ವೇತನ ನೀಡಲಾಗುವುದು. ಅಭ್ಯರ್ಥಿಗಳು ಪದವೀಧರರಾಗಿರಬೇಕು ಮತ್ತು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರಬೇಕು. ಈ ಕೆಳಗಿನ ಲಿಂಕನ್ನು ಉಪಯೋಗಿಸಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ವೆಬ್‌ಸೈಟ್ www.coconutfarmers.inಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here