ಮತ್ತೆ ಕರಾವಳಿ ಉತ್ಸವ ಯೋಜನೆಗೆ ಚಿಂತನೆ-10 ದಿನದ ಬದಲು 3 ದಿನಕ್ಕೆ ಸೀಮಿತಗೊಳಿಸಲು ಪರಿಶೀಲನೆ

0

ಮಂಗಳೂರು:ಕಳೆದ ಮೂರು ವರ್ಷಗಳಿಂದ ನಿಂತಿರುವ ಕರಾವಳಿ ಉತ್ಸವವನ್ನು ಪ್ರಸಕ್ತ ವರ್ಷ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲ್ಲೆöÊ ಮುಹಿಲನ್ ಎಂ.ಪಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರಾವಳಿ ಉತ್ಸವದಲ್ಲಿ ಜನಾಕರ್ಷಣೀಯ ಕಾರ್ಯಕ್ರಮಗಳಿಗೆ ಒತ್ತು ನೀಡಬೇಕು.ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳನ್ನು ಜೊತೆಗೂಡಿಸಿ ಈಗಿನ ಅಭಿರುಚಿಗೆ ತಕ್ಕಂತೆ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳುವುದು ಉತ್ತಮವಾಗಿದೆ.

ಜಿಲ್ಲೆಯಲ್ಲಿ ಸಾಕಷ್ಟು ಶಿಕ್ಷಣ ಸಂಸ್ಥೆಗಳಿವೆ.ಇವುಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಸಾಂಸ್ಕೃತಿಕ ಉತ್ಸವವನ್ನು ನಡೆಸಬಹುದಾಗಿದೆ.ಗುಣಮಟ್ಟದ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಹೊರಗಿನ ಕಲಾವಿದರಿಗೆ, ಸ್ಥಳೀಯರಿಗೆ ಆದ್ಯತೆ ನೀಡಬೇಕಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಮೂರು ದಿನಕ್ಕೆ ಸೀಮಿತ: ಕರಾವಳಿ ಉತ್ಸವವನ್ನು 10 ದಿನಗಳ ಬದಲು ಮೂರು ದಿನಗಳಿಗೆ ಸೀಮಿತಗೊಳಿಸಿ ಹೆಚ್ಚು ಗುಣಮಟ್ಟದ ಹಾಗೂ ಜನಾಕರ್ಷಣೆಯ ಕಾರ್ಯಕ್ರಮಗಳಿಗೆ ಒತ್ತು ನೀಡುವ ಬಗ್ಗೆ ಪರಿಶೀಲಿಸಲಾಗುವುದು.ಕರಾವಳಿ ಉತ್ಸವದ ಬಗ್ಗೆ ಮುಂದಿನ ದಿನಗಳಲ್ಲಿ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್ ಕೆ, ಡಿಸಿಪಿ ಸಿದ್ದಾರ್ಥ್ ಗೋಯಲ್, ಅಪರ ಜಿಲ್ಲಾಧಿಕಾರಿ ಡಾ|ಸಂತೋಷ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಆನಂದ್ ಸಿ.ಎಲ್ ಮತ್ತಿತರರು ಸಭೆಯಲ್ಲಿದ್ದರು.

LEAVE A REPLY

Please enter your comment!
Please enter your name here