ಬೆಂಗಳೂರು:ರಾಜ್ಯಾದ್ಯಂತ ಆರೋಗ್ಯ ಇಲಾಖೆಯ ಎಲ್ಲ ಸಭೆ ಸಮಾರಂಭಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ ಸರಕಾರಿ ಹಾಗೂ ಸರಕಾರಿ ಸ್ವಾಮ್ಯದ ಮಂಡಳಿ, ನಿಗಮ ವಿಶ್ವವಿದ್ಯಾನಿಲಯಗಳು, ಸರಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲಿನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಿ ಆದೇಶಿಸಲಾಗಿದೆ.ಸಾಮೂಹಿಕ ಕುಡಿಯುವ ನೀರು ವಿತರಣೆ ವ್ಯವಸ್ಥೆ ಏರ್ಪಡಿಸಲು ಸೆ.19ರಂದು ಸೂಚಿಸಲಾಗಿತ್ತು.ಆದರೆ ಆದೇಶವನ್ನು ಪಾಲಿಸದಿರುವುದು ಸರಕಾರದ ಗಮನಕ್ಕೆ ಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.