ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ವಾಲ್ಮೀಕಿ ಜಯಂತಿಯನ್ನು ವಾಲ್ಮೀಕಿ ಮಹರ್ಷಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು.
ಸಂಸ್ಥೆಯ ಉಪಪ್ರಾಂಶುಪಾಲ ವಸಂತ ಮೂಲ್ಯ ಅಧ್ಯಕ್ಷತೆ ವಹಿಸಿದರು. ಸಂಸ್ಕೃತ ಶಿಕ್ಷಕ ನಾಗರಾಜ್ ಭಟ್ ವಾಲ್ಮೀಕಿ ಮಹರ್ಷಿಯವರ ಕುರಿತು ಮಾತನಾಡಿದರು. ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ಜೋಕಿಂ ಡಿಸೋಜಾ, ಸದಸ್ಯರಾದ ಚನ್ನಪ್ಪರವರು ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಣ ತಜ್ಞ ಸೇರಾ ಕೋಟಿಯಪ್ಪ ಪೂಜಾರಿ ಉಪಸ್ಥಿತರಿದ್ದು ನಮನ ಸಲ್ಲಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಿಕ್ಷಕ ಗ್ರೆಗೋರಿ ರೋನಿ ಪಾಯಸ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ಜಾನ್ ವಾಲ್ಡಾರ್ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ, ಕಛೇರಿ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು.